ಕೆಂದ್ರ ಗೃಹ ಸಚೀವ ಅಮೀತ್ ಶಾ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಕುರಿತು ಸಂಸತ್ತಿನಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ್ದು ಅವರ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಇಂದು ವಿವಿಧ ಸಂಘಟನೆಗಳಿಂದ ಬಂದ್ ಗೆ ಕರೆ ನೀಡಲಾಗಿದ್ದು ವ್ಯಾಪಾರಸ್ಥರು ಸ್ವಯಂ ಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡುವ ಮೂಲಕ ಪ್ರತಿಭಟನೆಗೆ ಸಾಥ್ ನೀಡಿದರು.
GST Council Meetings: ಪಾಪ್ ಕಾರ್ನ್ ಮೇಲೆ 3 ರೀತಿಯ GST! 20ರೂ ಪ್ಯಾಕೆಟ್ ಬೆಲೆ ಎಷ್ಟು ಹೆಚ್ಚಾಗಲಿದೆ ಗೊತ್ತಾ.?
ಶಾಲಾ ಕಾಲೆಜುಗಳು,ವೈದ್ಯಕೀಯ ಸೌಲಭ್ಯ, ಸೇರಿದಂತೆ ಅಗತ್ಯ ಸೌಕರ್ಯಗಳನ್ನು ಹೊರತುಪಡಿಸಿ ವಾಹನ ಸಂಚಾರವಿಲ್ಲದೆ ಪ್ರಯಾಣಿಕರು ಪರದಾಡಿದ್ದು ಕಂಡುಬಂತು. ಈ ವೇಳೆ ವಿಜಯಪುರ ಬೆಳಗಾವಿ ರಾಜ್ಯ ಹೆದ್ದಾರಿಯಲ್ಲಿ ಅರ್ಧಗಂಟೆಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಸಿ ಅಂಬೇಡ್ಕರ್ ವೃತ್ತದಲ್ಲಿ ಕೇಂದ್ರ ಸಚೀವ ಅಮೀತ್ ಶಾ ಪ್ರತಿಕೃತಿ ದಹಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರಲ್ಲದೆ ಕೂಡಲೇ ಅಮಿತ್ ಶಾ ಅವರನ್ನು ಸಚೀವ ಸ್ಥಾನದಿಂದ ವಜಾಗೊಳಿಸುವಂತೆ ಆಗ್ರಹಿಸಿ ಅಥಣಿ ತಹಶಿಲ್ದಾರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.