ಬೆಂಗಳೂರು:- ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ ಕೊಟ್ಟಿರುವ ಒಕ್ಕಲಿಗ ಮಠದ ಚಂದ್ರಶೇಖರನಾಥ ಶ್ರೀಗಳಿಗೆ ತುರ್ತು ನೋಟಿಸ್ ಜಾರಿ ಮಾಡಲಾಗಿದೆ.
ಪಾಕ್ ಪ್ರಜೆಗಳ ಬಂಧನ ಪ್ರಕರಣ: ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ! 1,350ಕ್ಕೂ ಹೆಚ್ಚು ಪುಟಗಳಲ್ಲೇನಿದೆ!
ವಿಚಾರಣೆಗೆ ಹಾಜರಾಗುವಂತೆ ಚಂದ್ರಶೇಖರನಾಥ ಸ್ವಾಮೀಜಿಗೆ ನೋಟಿಸ್ ನೀಡಲಾಗಿದೆ. ಡಿ.2ರಂದು ಬೆಳಗ್ಗೆ 11ಕ್ಕೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ ಉಪ್ಪಾರಪೇಟೆ ಠಾಣೆ ಪೊಲೀಸರಿಂದ ನೋಟಿಸ್ ಜಾರಿ ಮಾಡಲಾಗಿದೆ.
ಸ್ವಾಮೀಜಿ ವಿರುದ್ಧ ಬಿಎನ್ಎಸ್ ಸೆಕ್ಷನ್ 299 ರ ಅಡಿಯಲ್ಲಿ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಚಂದ್ರಶೇಖರನಾಥ ಸ್ವಾಮೀಜಿ ವಿವಾದದ ಕಿಡಿ ಹೊತ್ತಿಸಿದ್ದಾರೆ. ವಕ್ಫ್ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ, ಮತದಾನದ ಹಕ್ಕಿಗೆ ಕೈ ಹಾಕಿದ್ದಾರೆ. ಮುಸ್ಲಿಮರಿಗೆ ಮತದಾನದ ಪವರ್ ಇಲ್ಲದಂತೆ ಮಾಡಿಬಿಡಬೇಕು ಅಂತಾ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು.
ವಿವಾದ ದೊಡ್ಡದಾಗುತ್ತಿದ್ದಂತೆ ಚಂದ್ರಶೇಖರನಾಥ ಸ್ವಾಮೀಜಿ ಸ್ಪಷ್ಟನೆ ನೀಡಿದ್ದರು. ಅದು ಬಾಯಿ ತಪ್ಪಿ ಆಡಿದ ಮಾತು. ಹಾಗೆ ಹೇಳಬಾರದಾಗಿತ್ತು. ಮುಸ್ಲಿಮರು ಭಾರತೀಯರೇ ಹೊರತು ಬೇರೆ ಯಾರೂ ಅಲ್ಲ. ದಯವಿಟ್ಟು ಈ ವಿಚಾರವನ್ನು ಇಲ್ಲಿಗೇ ಬಿಟ್ಟುಬಿಡಿ ಎಂದು ಸ್ವಾಮೀಜಿ ಮನವಿ ಮಾಡಿದ್ದರು.. .
ಇನ್ನು ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ FIR ಹಿನ್ನೆಲೆ ಆರ್.ಅಶೋಕ್ ಮತ್ತು ಡಾ.ಅಶ್ವತ್ಥ್ ನಾರಾಯಣ ಸ್ವಾಮೀಜಿಯನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನ ಕೆಂಗೇರಿಯಲ್ಲಿರುವ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠಕ್ಕೆ ಭೇಟಿ ನೀಡಿ ಕೆಲಹೊತ್ತು ಮಾತುಕತೆ ನಡೆಸಿ ಸ್ವಾಮೀಜಿಗೆ ಧೈರ್ಯ ಹೇಳಿದ್ದಾರೆ.