ಬೆಂಗಳೂರು:- ಪಿಎಸ್ಐ ಪರಶುರಾಮ ಸಾವು ಕೇಸ್ ಗೆ ಸಂಬಧಪಟ್ಟಂತೆ ರಾಜ್ಯ ಸರ್ಕಾರದಿಂದ ಕೇಂದ್ರ ಗೃಹ ಸಚಿವಾಲಯ ವರದಿ ಕೇಳಿದೆ.
ನನ್ನನ್ನು ಬಿಟ್ಟುಬಿಡಿ ಪ್ಲೀಸ್: ಶೆಡ್ನಲ್ಲಿ ರೇಣುಕಾಸ್ವಾಮಿ ಕೈ ಮುಗಿದು ಅಂಗಲಾಚುತ್ತಿರುವ ಫೋಟೋ ವೈರಲ್!
ಯಾದಗಿರಿ ಪಿಎಸ್ಐ ಪರಶುರಾಮ ಅನುಮಾನಾಸ್ಪದ ಸಾವು ನಿಷ್ಪಕ್ಷಪಾತ ತನಿಖೆ ಆಗುತ್ತಿಲ್ಲ ಎಂದು ಸಚಿವೆ ಶೋಭಾ ಇತ್ತೀಚೆಗೆ ಆರೋಪ ಮಾಡಿದ್ದರು. ಜೊತೆಗೆ ಪತ್ರ ಕೂಡ ಬರೆದಿದ್ದರು. ಸದ್ಯ ಸಚಿವೆ ಶೋಭಾ ಕರಂದ್ಲಾಜೆ ಪತ್ರಕ್ಕೆ ಸ್ಪಂದಿಸಿರುವ ಕೇಂದ್ರ ಗೃಹ ಸಚಿವಾಲಯ ಪ್ರಕರಣದ ಮಾಹಿತಿ ನೀಡುವಂತೆ ಸೂಚಿಸಿದೆ.
ಯಾದಗಿರಿ ಪಿಎಸ್ಐ ಪರಶುರಾಮ ಅನುಮಾನಾಸ್ಪದ ಸಾವು ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಗೃಹ ಸಚಿವಾಲಯಕ್ಕೆ ಸಚಿವೆ ಶೋಭಾ ಕರಂದ್ಲಾಜೆ ಪತ್ರ ಬರೆದಿದ್ದ ಬೆನ್ನೆಲ್ಲೇ ಇದೀಗ ವರದಿ ನೀಡುವಂತೆ ಮುಖ್ಯ ಕಾರ್ಯದರ್ಶಿಗೆ ಕೇಂದ್ರ ಸರ್ಕಾರ ತಿಳಿಸಿದೆ.