ಬೆಂಗಳೂರು:- ಜನವರಿ 23 ರಂದು 545 ಪಿಎಸ್ಐ ಮರು ಪರೀಕ್ಷೆ ಹಿನ್ನೆಲೆ, ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಿ ಆದೇಶಿಸಿದ್ದಾರೆ.
ಪಿಎಸ್ಐ ಮರು ಪರೀಕ್ಷೆ ಬೆಂಗಳೂರು ನಗರದಲ್ಲಿ ಮಾತ್ರ ನಡೆಯಲಿದ್ದು, ಒಟ್ಟು 117 ಕೇಂದ್ರಗಳಲ್ಲಿ ಸಿದ್ಧತೆಗಳನ್ನು ನಡೆಸಲಾಗುತ್ತಿದೆ. ಈ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ಬೆಳಗ್ಗೆ 7 ಗಂಟೆಯಿಂದ ಪರೀಕ್ಷೆ ಮುಗಿಯುವವರೆಗೆ ಜೆರಾಕ್ಸ್ ಅಂಗಡಿಗಳನ್ನು ಬಂದ್ ಮಾಡುವಂತೆ ಆದೇಶದಲ್ಲಿ ಸೂಚಿಸಲಾಗಿದೆ.