ಯುವ ನಾಯಕ ವಿಕ್ರಾಂತ್, ಮೆಹ್ರೀನ್ ಪಿರ್ಜಾದಾ ಮತ್ತು ರುಕ್ಸಾರ್ ಧಿಲ್ಲೋನ್ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ‘ಸ್ಪಾರ್ಕ್ L.I.F.E’ ನವೆಂಬರ್ 17ರಂದು ರಿಲೀಸ್ ಆಗಿತ್ತು. ಈ ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ‘ಸ್ಪಾರ್ಕ್ L.I.F.E’ ಮೂಲಕ ವಿಕ್ರಾಂತ್ ನಾಯಕನಾಗಿ ಮೊದಲ ಹೆಜ್ಜೆ ಇಟ್ಟಿದ್ದರು.
ಜೊತೆಗೆ ಚಿತ್ರಕ್ಕೆ ಕಥೆ ಮತ್ತು ಚಿತ್ರಕಥೆಯನ್ನು ಸಹ ಬರೆದಿದ್ದರು. ಇದೀಗ ‘ಸ್ಪಾರ್ಕ್ L.I.F.E’ ಅಮೇಜಾನ್ ಪ್ರೈಮ್ ನಲ್ಲಿ ಸ್ಟ್ರೀಮಿಂಗ್ ಆಗಿದೆ. ತೆಲುಗು ಜೊತೆ ಕನ್ನಡ, ತಮಿಳು, ಮಲಯಾಳಂ ಸೇರಿದಂತೆ ಹಿಂದಿ ಭಾಷೆಯಲ್ಲಿ ಚಿತ್ರ ಅಮೇಜಾನ್ ಒಟಿಟಿಯಲ್ಲಿ ಲಭ್ಯವಿದೆ.
ಡೆಫ್ ಫ್ರಾಗ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ತಯಾರಾಗಿರುವ ಈ ಚಿತ್ರಕ್ಕೆ ‘ಹೃದಯಂ’ ಮತ್ತು ಕುಶಿ ಖ್ಯಾತಿಯ ಹೇಶಮ್ ಅಬ್ದುಲ್ ವಹಾಬ್ ಸಂಗೀತ ನೀಡಿದ್ದಾರೆ. ಮಲಯಾಳಂನ ಹಿರಿಯ ನಟ ಗುರು ಸೋಮಸುಂದರಂ ಖಳನಾಯಕನಾಗಿ ನಟಿಸಿದ್ದಾರೆ.
ಸೈಕಲಾಜಿಕಲ್ ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ‘ಸ್ಪಾರ್ಕ್ L.I.F.E’ ಚಿತ್ರದಲ್ಲಿ ನಾಸರ್, ಸುಹಾಸಿನಿ ಮಣಿರತ್ನಂ, ವೆನ್ನೆಲ ಕಿಶೋರ್, ಸತ್ಯ, ಬ್ರಹ್ಮಾಜಿ, ಶ್ರೀಕಾಂತ್ ಅಯ್ಯಂಗಾರ್, ಅನ್ನಪೂರ್ಣಮ್ಮ, ಚಮ್ಮಕ್ ಚಂದ್ರ, ರಾಜಾ ರವೀಂದ್ರ ಮುಂತಾದವರಿದ್ದಾರೆ. ಥಿಯೇಟರ್ ನಲ್ಲಿ ‘ಸ್ಪಾರ್ಕ್ L.I.F.E’ ಸಿನಿಮಾ ಮಿಸ್ ಮಾಡಿಕೊಂಡವರು ಒಟಿಟಿಯಲ್ಲಿ ವೀಕ್ಷಿಸಬಹುದು.