ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ಸಂಬಂಧಿಸಿದ ಮಾಹಿತಿಗಾಗಿ ಎಲ್ಲಾ ಎಂಟು ವಲಯಗಳಲ್ಲಿ ನಿಯಂತ್ರಣಾ ಕೊಠಡಿಗಳನ್ನು ತೆರೆಯಲಾಗಿದೆ. ನಗರದ ಎಲ್ಲಾ ನಾಗರೀಕರು ಕೋವಿಡ್ ಸಂಬಂಧಿಸಿದಂತೆ ಟ್ರಯಾಜಿಂಗ್, ಕೋವಿಡ್ ಪರೀಕ್ಷೆ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮಾಹಿತಿ, ಆಸ್ಪತ್ರೆಗೆ ದಾಖಲಾಗುವ, ಲಸಿಕೆ ಪಡೆಯುವುದು ಸೇರಿದಂತೆ ಇನ್ನಿತರೆ ವಿಷಯಗಳ ಬಗ್ಗೆ ನಿಯಂತ್ರಣ ಕೊಠಡಿಯ ಸಿಬ್ಬಂದಿಯು ದಿನದ 24 ಗಂಟೆಯೂ ಅಗತ್ಯ ಮಾಹಿತಿ ನೀಡಲಿದ್ದಾರೆ. ನಾಗರೀಕರು ಇದರ ಸದುಪಯೋಗಪಡಿಸಿಕೊಂಡು ನಗರದಲ್ಲಿ ಕೋವಿಡ್ ಸೋಂಕನ್ನು ನಿಯಂತ್ರಿಸಲು ಸಹಕರಿಸಬೇಕಾಗಿ ಬಿಬಿಎಂಪಿ ಮನವಿ ಮಾಡಿದೆ.
