ಬೆಂಗಳೂರು:– 2024 ರ ಲೋಕಸಭಾ ಚುನಾವಣೆಯ ಮತಎಣಿಕೆಗೆ ಕರ್ನಾಟಕದ ಮತಗಟ್ಟೆಗಳು ಸಜ್ಜು, ಬೆಳಗ್ಗೆ 8 ಗಂಟೆಯಿಂದ ಲೆಕ್ಕಾಚಾರ ಆರಂಭವಾಗಿದೆ. ಬೆಳಗ್ಗೆ 8 ಗಂಟೆಯಿಂದ ಮತಗಣನೆ ಆರಂಭವಾಗಲಿದೆ.
ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಮತಎಣಿಕೆ ಪ್ರಕ್ರಿಯೆ ಇಂದು ನಡೆಯಲಿದೆ. ಬೆಳಗ್ಗೆ 8 ಗಂಟೆಯಿಂದ ವಿವಿಧ ಮತ ಎಣಿಕೆ ಕೇಂದ್ರಗಳಲ್ಲಿ ಮತ ಎಣಿಕೆ ಆರಂಭವಾಗಲಿದೆ. ಪ್ರತಿಯೊಂದು ಮತ ಎಣಿಕೆ ಕೇಂದ್ರಗಳ ಪ್ರತಿಯೊಂದು ಟೇಬಲ್ಗೆ ಸೂಕ್ಷ್ಮ ವೀಕ್ಷಕ, ಮತ ಎಣಿಕೆ ಮೇಲ್ವಿಚಾರಕರು ಮತ್ತು ಮತ ಎಣಿಕೆ ಸಹಾಯಕರನ್ನು ನಿಯೋಜನೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮತಎಣಿಕೆ ಕೇಂದ್ರಗಳ ಸುತ್ತಮುತ್ತ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೆಲವು ಕಡೆ ರಸ್ತೆ ಸಂಚಾರಗಳನ್ನು ಬದಲಾವಣೆ ಮಾಡಲಾಗಿದೆ. ಎಕ್ಸಿಟ್ ಪೋಲ್ ವರದಿ ಪ್ರಕಾರ ಕರ್ನಾಟಕದಲ್ಲಿ ಬಿಜೆಪಿ 20ಕ್ಕೂ ಹೆಚ್ಚು ಸ್ಥಾನ ಗಳಿಸಬಹುದೇ? ಹಲವು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿ ಜಾರಿ ಮಾಡಿರುವ ಕಾಂಗ್ರೆಸ್ಗೆ ಈ ಬಾರಿ ಹೆಚ್ಚು ಸ್ಥಾನಗಳು ದೊರಕಲಿವೆಯೇ? ಹಾಸನ ಪೆನ್ಡ್ರೈವ್ ಪ್ರಕರಣದಿಂದ ಸುದ್ದಿಯಲ್ಲಿರುವ ಪ್ರಜ್ವಲ್ ರೇವಣ್ಣ ಗೆಲುವು ಪಡೆಯಲಿದ್ದಾರೆಯೇ? ಬೆಂಗಳೂರು ವಿಧಾನಸಭಾ ಕ್ಷೇತ್ರಗಳಲ್ಲಿ ಏನಾಗಲಿದೆ?
ಬಾಗಲಕೋಟೆ, ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಬೆಳಗಾವಿ, ಬಳ್ಳಾರಿ, ಬೀದರ್, ವಿಜಯಪುರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕೋಡಿ, ಚಿತ್ರದುರ್ಗ, ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಗುಲ್ಬರ್ಗ,ಹಾಸನ, ಹಾವೇರಿ, ಕೋಲಾರ, ಕೊಪ್ಪಳ, ಮಂಡ್ಯ, ಮೈಸೂರು, ರಾಯಚೂರು, ಶಿವಮೊಗ್ಗ, ತುಮಕೂರು, ಉಡುಪಿ ಚಿಕ್ಕಮಗಳೂರು ಮತ್ತು ಉತ್ತರ ಕನ್ನಡ ಲೋಕಸಭಾ ಕ್ಷೇತ್ರಗಳಲ್ಲಿ ಮತಎಣಿಕೆ, ಹಿನ್ನಡೆ ಮುನ್ನಡೆ, ಗೆಲುವು ಪಡೆದ ಅಭ್ಯರ್ಥಿಗಳು ಸೇರಿದಂತೆ ಕ್ಷಣಕ್ಷಣದ ವಿವರ ಲಭ್ಯವಾಗಲಿದೆ.