ಕೊಪ್ಪಳ:- ಜಿಲ್ಲೆಯ ಗಂಗಾವತಿ ತಾಲೂಕಿನ ದಾಸನಾಳ ಗ್ರಾಮದ ಹೊರವಲಯದಲ್ಲಿ ಬೈಕ್ ವ್ಹೀಲಿಂಗ್ ತಡೆದಿದ್ದಕ್ಕೆ ಕಾನ್ಸ್ಟೇಬಲ್ ಮೇಲೆ ಪುಂಡರಿಂದ ಹಲ್ಲೆ ಮಾಡಿರುವಂತಹ ಘಟನೆ ಜರುಗಿದೆ.
ಇನ್ನೂ ನಾಲ್ಕು ತಿಂಗಳಲ್ಲಿ ಕಂಪ್ಲಿ ಕ್ಷೇತ್ರಕ್ಕೆ 10 ಸಾವಿರ ಮನೆ ವಿತರಣೆ: ಸಚಿವ ಜಮೀರ್!
ಹಲ್ಲೆ ಮಾಡಿದ ರೌಡಿಶೀಟರ್ ಅರ್ಬಾಜ್ ಸೇರಿದಂತೆ ಮೂವರನ್ನು ವಶಕ್ಕೆ ಪಡೆದಿದ್ದು, ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಗಂಗಾವತಿ ಹೊರವಲಯದಲ್ಲಿ ಪುಂಡರು ಬೈಕ್ ವ್ಹೀಲಿಂಗ್ ಮಾಡುತ್ತಿದ್ದರು. ಅದನ್ನು ತಡೆಯಲು ಮುಂದಾದ ಗಂಗಾವತಿ ಗ್ರಾಮಾಂತರ ಠಾಣೆ ಕಾನ್ಸ್ಟೇಬಲ್ ಬಸವರಾಜುಗೆ ಥಳಿಸಿದ್ದಾರೆ. ಈ ವೇಳೆ ಸ್ಥಳಕ್ಕೆ ಬಂದ ಮತ್ತೊಬ್ಬ ಕಾನ್ಸ್ಟೇಬಲ್ ಮೇಲೂ ಹಲ್ಲೆಗೆ ಪ್ರಯತ್ನ ಮಾಡಲಾಗಿದೆ. ಸದ್ಯ ಕಾನ್ಸ್ಟೇಬಲ್ ಬಸವರಾಜುವನ್ನು ಗಂಗಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಶಕ್ಕೆ ಪಡೆದವರನ್ನು ಗಂಗಾವತಿ ಗ್ರಾಮೀಣ ಠಾಣೆಗೆ ಪೊಲೀಸರು ಕರೆತಂದಿದ್ದಾರೆ.