ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಟೆಸ್ಟ್ ಸರಣಿಯ ಮೊದಲೆರಡು ಪಂದ್ಯಗಳು ಮುಗಿದಿವೆ. ಇನ್ನುಳಿದಿರುವುದು ಕೊನೆಯ ಟೆಸ್ಟ್ ಪಂದ್ಯ ಮಾತ್ರ. ಈ ಪಂದ್ಯವು ನವೆಂಬರ್ 1 ರಿಂದ ಶುರುವಾಗಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವ ಇರಾದೆಯಲ್ಲಿದೆ ಕಿವೀಸ್ ಪಡೆ ಇದೆ.
ಕಂಡವರ ಜಮೀನಿಗೆಲ್ಲಾ ಮುಲ್ಲಾಗಳು ನೋಟಿಸ್ ಕೊಡ್ತಿದ್ದಾರೆ: ಪ್ರತಾಪ್ ಸಿಂಹ ಕಿಡಿ!
ಇನ್ನೂ ನ್ಯೂಜಿಲೆಂಡ್ ವಿರುದ್ಧ ಮಹತ್ವದ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದಿಂದ ರಿಷಬ್ ಪಂತ್ ಔಟ್ ಆಗಿದ್ದಾರೆ. ನವೆಂಬರ್ 1ನೇ ತಾರೀಕಿನಿಂದ ಶುರುವಾಗೋ ಈ ಟೆಸ್ಟ್ ಪಂದ್ಯ 5ರ ವರೆಗೆ ನಡೆಯಲಿದೆ. ಭಾರತ ತಂಡ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ತಲುಪಲು ಈ ಪಂದ್ಯ ಗೆಲ್ಲಲೇಬೇಕಿದೆ.
ನ್ಯೂಜಿಲೆಂಡ್ ವಿರುದ್ಧದ 3ನೇ ಟೆಸ್ಟ್ನಿಂದ ಟೀಮ್ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ರಿಷಬ್ ಪಂತ್ ಔಟ್ ಆಗೋ ಸಾಧ್ಯತೆ ಇದೆ. ಮೊದಲ ಟೆಸ್ಟ್ನಲ್ಲಿ ಪಂತ್ ಕೀಪಿಂಗ್ ಮಾಡುವಾಗ ತೀವ್ರವಾಗಿ ಗಾಯಗೊಂಡಿದ್ದರು. ಮೊಣಕಾಲಿಗೆ ಎಲ್ಲಿ ಸರ್ಜರಿ ಆಗಿತ್ತೋ ಅದೇ ಜಾಗಕ್ಕೆ ಗಾಯ ಆಗಿತ್ತು. ಬಾಲ್ ಬಲವಾಗಿ ಬಿದ್ದ ಕಾರಣ ಪಂತ್ ನೋವಿನಿಂದ ಕುಸಿದು ಬಿದ್ದಿದ್ದರು. ಬಳಿಕ ಮೈದಾನದಿಂದ ಹೊರ ನಡೆದಿದ್ದು, ಇವರ ಬದಲಿಗೆ ಧ್ರುವ್ ಜುರೆಲ್ ವಿಕೆಟ್ ಕೀಪಿಂಗ್ ಮಾಡಿದ್ದರು. ರೆಸ್ಟ್ ಮಾಡಿದ ನಂತರ 2ನೇ ಟೆಸ್ಟ್ನಲ್ಲಿ ಬ್ಯಾಟಿಂಗ್ ಮಾಡಿದ್ರು. ಆದರೆ, ರನ್ನಿಂಗ್ ವೇಳೆ ಮತ್ತೆ ಅದೇ ಕಾಲಿಗೆ ಪೆಟ್ಟು ಬಿದ್ದಿದೆ ಎಂದು ತಿಳಿದು ಬಂದಿದೆ
ಮೊದಲ ಟೆಸ್ಟ್ ಪಂದ್ಯ ಸೋಲಿನ ಕನ್ನಡಿಗ ಕೆ.ಎಲ್ ರಾಹುಲ್ ಅವರನ್ನು ಬೆಂಚ್ ಕಾಯಿಸಲಾಗಿತ್ತು. ಈಗ ಪಂತ್ಗೆ ಇಂಜೂರಿ ಆಗಿರೋ ಕಾರಣ ಇವರಿಗೆ ತಂಡದಲ್ಲಿ ಸ್ಥಾನ ನೀಡಲಾಗುವುದು ಎಂದು ತಿಳಿದು ಬಂದಿದೆ.