ಮಂಗಳೂರು: ಪ್ರಖ್ಯಾತ ಹುಲಿವೇಷ ತಂಡವಾದ ಕಲ್ಲೇಗ ಟೈಗರ್ಸ್ನ (Kallega Tigers) ಮುಖ್ಯಸ್ಥ ಬರ್ಬರವಾಗಿ ಹತ್ಯೆಯಾದ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಪುತ್ತೂರು (Puttur) ತಾಲೂಕಿನ ನೆಹರೂ ನಗರ (Nehru Nagar) ಜಂಕ್ಷನ್ನಲ್ಲಿ ನಡೆದಿದೆ. ಅಕ್ಷಯ್ ಕಲ್ಲೇಗ (26) ಬರ್ಬರವಾಗಿ ಹತ್ಯೆಯಾದ ಯುವಕ. ಹುಲಿಕುಣಿತದಲ್ಲಿ ಕಲ್ಲೇಗ ಟೈಗರ್ಸ್ ತಂಡದ ನೇತೃತ್ವ ವಹಿಸಿಕೊಂಡಿದ್ದ ಅಕ್ಷಯ್ನನ್ನು ಮಾಣಿ-ಮೈಸೂರು ಹೆದ್ದಾರಿಯ ನೆಹರೂ ನಗರ ಜಂಕ್ಷನ್ನಲ್ಲಿ ಅಟ್ಟಾಡಿಸಿ ಕೊಲೆ (Murder) ಮಾಡಲಾಗಿದೆ.
ಹತ್ಯೆಗೈದ ಬನ್ನೂರು ನಿವಾಸಿ ಮನೀಷ್ ಹಾಗೂ ಚೇತು ಘಟನೆಯ ಬಳಿಕ ಪೊಲೀಸ್ ಠಾಣೆಗೆ ಶರಣಾಗಿದ್ದಾರೆ. ಮತ್ತೋರ್ವ ಆರೋಪಿ ತಲೆಮರೆಸಿಕೊಂಡಿರುವ ಮಾಹಿತಿ ಲಭಿಸಿದೆ. ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದ ವಿಚಾರದಲ್ಲಿ ಆರೋಪಿಗಳು ಹಾಗೂ ಅಕ್ಷಯ್ ನಡುವೆ ಗಲಾಟೆಯಾಗಿತ್ತು. ಈ ಸಂದರ್ಭ ಎರಡು ಸಾವಿರ ರೂ. ನೀಡುವ ವಿಚಾರದಲ್ಲಿ ಮಾತುಕತೆ ವಿಕೋಪಕ್ಕೆ ತಿರುಗಿದೆ.
“ದೀರ್ಘಕಾಲದ ಬೆನ್ನು ನೋವು” ಇಲ್ಲಿದೆ ಸರಳ ಚಿಕಿತ್ಸೆ: ಪರಿಹಾರ, ಉಚಿತ ಸಲಹೆ
ಬಸ್ ಚಾಲಕ ಚೇತು ಎಂಬಾತನ ಬೆಂಬಲಿಗ ಹಾಗೂ ಅಕ್ಷಯ್ ನಡುವೆ ತೀವ್ರ ವಾಗ್ವಾದ ನಡೆದಿದೆ. ಕೊನೆಗೆ ಮೂರಕ್ಕೂ ಅಧಿಕ ಮಂದಿಯ ತಂಡದಿಂದ ದಾಳಿ ನಡೆಸಿ ಅಕ್ಷಯ್ನನ್ನು ಅಟ್ಟಾಡಿಸಿ ತಲವಾರಿನಿಂದ ಹತ್ಯೆ ಮಾಡಲಾಗಿದೆ. ಹತ್ಯೆಗೆ ಬೇರೆ ಕಾರಣಗಳು ಇದೆಯಾ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಕುರಿತು ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.