ಬೆಂಗಳೂರು:- ಆರೋಗ್ಯ ಕ್ಷೇತ್ರವನ್ನು ಸುಧಾರಿಸುವಲ್ಲಿ ತಂತ್ರಜ್ಞಾನದ ಪಾತ್ರ ಮಹತ್ವದ್ದಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಮುಖ್ಯಮಂತ್ರಿಗಳ ಜೊತೆಗಿನ ಸಭೆ ಯಶಸ್ವಿ: ಮದ್ಯ ಮಾರಾಟ ಬಂದ್ ಮುಷ್ಕರ ವಾಪಸ್!
ಈ ಸಂಬಂಧ ಮಾತನಾಡಿದ ಅವರು, ಗ್ರಾಮೀಣ ಪ್ರದೇಶಗಳಲ್ಲಿ ಎಐ, ಟೆಲಿಮೆಡಿಸಿನ್, ಟೆಲಿ ಐಸಿಯುಗಳ ಮೂಲಕ ಅತ್ಯಾಧುನಿಕ ಗುಣಮಟ್ಟದ ಆರೋಗ್ಯ ಸೇವೆ ನೀಡುವತ್ತ ನಮ್ಮ ಸರ್ಕಾರ ಚಿತ್ತ ಹರಿಸಿದೆ ಎಂದರು.
ಆರೋಗ್ಯ ಕ್ಷೇತ್ರವನ್ನು ಸುಧಾರಿಸುವಲ್ಲಿ ತಂತ್ರಜ್ಞಾನದ ಪಾತ್ರ ಹೆಚ್ಚಿದೆ. ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಉತ್ಕೃಷ್ಟ ಗುಣಮಟ್ಟದ ಆರೋಗ್ಯ ಸೇವೆಯ ಅಗತ್ಯತೆ ಇದೆ. ಈ ಕಾರಣಕ್ಕಾಗಿ ಎಐ, ಟೆಲಿಮೆಡಿಸಿನ್ ಮತ್ತು ಟೆಲಿ-ಐಸಿಯುಗಳ ಸಮರ್ಪಕ ಬಳಕೆಯೊಂದಿಗೆ ಅತ್ಯಾಧುನಿಕ ಆರೋಗ್ಯ ಸೇವೆ ನೀಡಲು ನಮ್ಮ ಸರ್ಕಾರ ಶ್ರಮಿಸುತ್ತಿದೆ ಎಂದು ತಿಳಿಸಿದರು.
ಲೆಟ್ಸ್ ವೆಂಚರ್ನ ಸಂಸ್ಥಾಪಕಿ ಶಾಂತಿ ಮೋಹನ್ ಮಾತನಾಡಿ, ಸ್ಟಾರ್ಟ್ಅಪ್ಗಳು ಮತ್ತು ಉದ್ಯಮದ ಅಗತ್ಯಗಳ ನಡುವಿನ ಅಂತರವನ್ನು ಕಡಿಮೆ ಮಾಡಲು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸ್ಟಾರ್ಟ್ಅಪ್ಗಳು ತಜ್ಞರೊಂದಿಗೆ ಸಂಪರ್ಕಿಸಿ ಮಾರ್ಗದರ್ಶನವನ್ನು ಪಡೆಯಲು ಹಾಗೂ ಆರ್ಥಿಕ ನೆರವು ಪಡೆಯಲು ಇದು ವೇದಿಕೆಯಾಗಿದೆ ಎಂದು ಹೇಳಿದರು.