ಮಂಗಳೂರು:- ಜೈಲಿನಲ್ಲೇ ಖೈದಿಗಳು ಕಿತ್ತಾಟ ಮಾಡಿಕೊಂಡಿದ್ದು, ಅದರಲ್ಲಿ ಇಬ್ಬರು ಗಂಭೀರವಾದ ಘಟನೆ ಮಂಗಳೂರು ಸೆಂಟ್ರಲ್ ಜೈಲಿನಲ್ಲಿ ಜರುಗಿದೆ.
Gold Silver Price: ಅಲ್ಪ ಏರಿತೆ ಕಂಡ ಬೆಳ್ಳಿ. ಇಲ್ಲಿದೆ ಇಂದಿನ ಚಿನ್ನ, ಬೆಳ್ಳಿ ದರಪಟ್ಟಿ..!
ಮೊಹಮ್ಮದ್ ಸಮೀರ್ ಅಲಿಯಾಸ್ ಕಡಪರ ಸಮೀರ್(33) ಮತ್ತು ಬೋಳಿಯಾರ್ ನಿವಾಸಿ ಮೊಹಮ್ಮದ್ ಮನ್ಸೂರ್(30) ಎನ್ನುವರು ಘರ್ಷಣೆ ವೇಳೆ ಗಾಯಗೊಂಡಿದ್ದಾರೆ.
ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಸದ್ಯ ಅವರನ್ನು ಜೈಲಿನಿಂದ ಆಸ್ಪತ್ರಗೆ ದಾಖಲಿಸಲಾಗಿದೆ. ಇಬ್ಬರನ್ನೂ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು. ಸದ್ಯ ಅಪಾಯದಿಂದ ಪಾರಾಗಿದ್ದಾರೆ. ಇನ್ನು ಘಟನೆ ಸಂಬಂಧ ಜೈಲು ಅಧಿಕಾರಿಗಳ ದೂರಿನ ಮೇರೆಗೆ ಬರ್ಕೆ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ನಿನ್ನೆ ಸಂಜೆ 6.30ರಿಂದ 6.45ರ ನಡುವೆ ಜೈಲಿನ ಎ ಬ್ಯಾರಕ್ನ ಅಡುಗೆ ಮನೆಯಲ್ಲಿದ್ದ ಕೆಲವು ಹರಿತವಾದ ವಸ್ತುಗಳಿಂದ ಹೊಡೆದಾಡಿಕೊಂಡಿದ್ದಾರೆ. ರೌಡಿಶೀಟರ್ ಟೋಪಿ ನೌಫಲ್ & ಗ್ಯಾಂಗ್ ವಿರುದ್ಧ ದಾಳಿ ಮಾಡಿರುವ ಆರೋಪ ಕೇಳಿಬಂದಿದೆ
ಘಟನೆಯಲ್ಲಿ ಇಬ್ಬರು ಗಾಯಾಳುಗಳಿಗೆ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ವಿಷಯ ತಿಳಿದು ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಹಲ್ಲೆ ಮಾಡಿದ ತಂಡದ ಸೆಲ್ಗಳ ಮೇಲೆ ದಾಳಿ, ಪರಿಶೀಲಿಸಿದ್ದು, ಘಟನೆ ಬಗ್ಗೆ ಸಿಸಿಟಿವಿಯಲ್ಲಿ ಸೆರೆಯಾಗಿರುವ ಬಗ್ಗೆ ಕಮಿನಷರ್ ಮಾಹಿತಿ ಪಡೆದುಕೊಂಡಿದ್ದಾರೆ.
ಮುಫದ್ ರಿಫಾತ್(28), ಮೊಹಮ್ಮದ್ ರಿಜ್ವಾನ್(34), ಇಬ್ರಾಹಿಂ ಕಲ್ಲೆಲ್(30), ಉಮರ್ ಫಾರೂಕ್ ಇರ್ಫಾನ್, ಅಲ್ತಾಫ್, ನೌಫಲ್, ಜೈನುದ್ದೀನ್ ವಿರುದ್ಧ ಹಲ್ಲೆ ಆರೋಪ ಕೇಳಿಬಂದಿದೆ. ಆರೋಪಿಗಳು, ಹಲ್ಲೆಗೊಳಗಾದವರ ವಿರುದ್ಧ ಹಲವು ಪ್ರಕರಣ ದಾಖಲಾಗಿವೆ