ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರಿಗೆ ವಿಮೆ ನೀಡುವ ಬಗ್ಗೆ ಶೀಘ್ರ ತೀರ್ಮಾನ ಕೈಗೊಳ್ಳುವುದಾಗಿ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ. ಜು.22ರಿಂದ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವಪ್ರಾಥಮಿಕ (ಎಲ್ಕೆಜಿ, ಯುಕೆಜಿ) ಶಾಲೆ ಆರಂಭಿಸಲಾಗುವುದು ಎಂದು ಹೇಳಿದ್ದಾರೆ.
ಕಾವೇರಿ ನೀರು ಬಿಡುಗಡೆ ಕುರಿತು CWRC ಆದೇಶ: ಸಿಎಂ ಅಧ್ಯಕ್ಷತೆಯಲ್ಲಿ ಸರ್ವಪಕ್ಷಗಳ ಸಭೆ
ಜುಲೈ 22ರಂದು ರಾಜ್ಯದ 250 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಸಾಂಕೇತಿಕವಾಗಿ ಆರಂಭವಾಗಲಿದೆ. ಮಕ್ಕಳಿಗೆ ಇಲಾಖೆ ವತಿಯಿಂದಲೇ ಬ್ಯಾಗ್, ಪುಸ್ತಕ, ಸಮವಸ್ತ್ರ ವಿತರಣೆ ಮಾಡಲಾಗುವುದು ಎಂದು ಹೇಳಿದ್ದಾರೆ. ಅಂಗನವಾಡಿ ಕೇಂದ್ರಗಳ ಉನ್ನತೀಕರಣದ ಮೊದಲ ಭಾಗವಾಗಿ ಕ್ರಮಕೈಗೊಳ್ಳಲಾಗುತ್ತಿದೆ. ಮೊದಲ ಹಂತದಲ್ಲಿ 15-20 ಸಾವಿರ ಶಾಲೆಗಳಲ್ಲಿ ಗವರ್ನಮೆಂಟ್ ಮಾಂಟೆಸ್ಸರಿ ಕೂಡ ಆರಂಭಿಸುತ್ತೇವೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಜೀವವಿಮಾ ಯೋಜನೆ ಕುರಿತು ಶೀಘ್ರ ನಿರ್ಧಾರ ಮಾಡಲಾವುದು ಎಂದಿದ್ದಾರೆ.