“ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ ನಡೆಸುವ ಸಲುವಾಗಿ ಮಂಡ್ಯ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಂಡ್ಯ, ಮೈಸೂರು ಭಾಗದ ಶಾಸಕರು, ವಿಧಾನಪರಿಷತ್ ಸದಸ್ಯರು, ಕಾವೇರಿ ಅಭಿವೃದ್ಧಿ ನಿಗಮದ ಹಿರಿಯ ಅಧಿಕಾರಿಗಳು ಈಗಾಗಲೇ ಮೂರು ದಿನಗಳ ಕಾಲ ಹರಿದ್ವಾರ ಹಾಗೂ ಕಾಶಿಗೆ ಭೇಟಿ ನೀಡಿ ಅಧ್ಯಯನ ನಡೆಸಿ ಬಂದಿರುವಾಗ ಈಗ ಮತ್ತೊಮ್ಮೆ ಅಧಿಕಾರಿಗಳ ನಿಯೋಗ ಕಳುಹಿಸುತ್ತಿರುವುದು ಯಾತಕ್ಕೆ?” ಎಂದು ಸಾಮಾಜಿಕ ಮಾಧ್ಯಮ ಎಕ್ಸ್ ಮುಖಾಂತರ ಪ್ರಶ್ನಿಸಿದ್ದಾರೆ.
ಈಗ ಮತ್ತೊಮ್ಮೆ ಅಧಿಕಾರಿಗಳ ನಿಯೋಗ ಹೋಗಬೇಕು ಎನ್ನುವುದಾದರೆ ಸಚಿವರು ತಮ್ಮ ತಂಡದೊಂದಿಗೆ ಅಲ್ಲಿ ಹೋಗಿ ಮಾಡಿದ್ದಾದರೂ ಏನು? ಸರ್ಕಾರಿ ಹಣದಲ್ಲಿ ಮೋಜು-ಮಸ್ತಿ ಮಾಡಲು ಹೋಗಿದ್ದಾ? ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ ಮಾಡಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್ ಅವರೇ, ನಿಮಗೆ ನಿಜವಾಗಿಯೂ ದೇಶ-ಧರ್ಮದ ಬಗ್ಗೆ ಕಿಂಚಿತ್ತಾದರೂ ಕಾಳಜಿ ಇದ್ದರೆ, ಮೊದಲು ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಬ್ರದರ್ಸ್ ಗಳನ್ನ ಒದ್ದು ಒಳಗೆ ಹಾಕಿ, ನಾಗಮಂಗಲದಲ್ಲಿ, ದಾವಣಗೆರೆಯಲ್ಲಿ ಗಣೇಶ ವಿಸರ್ಜನೆ ವೇಳೆ ಗಲಭೆ ಎಬ್ಬಿಸಿದ ಬ್ರದರ್ಸ್ಗಳನ್ನು ಒದ್ದು ಒಳಗೆ ಹಾಕಿ, ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ಟೈನ್ ಧ್ವಜ ಹಿಡಿದು ಪುಂಡಾಟಿಕೆ ಮಾಡಿದ ಬ್ರದರ್ಸ್ಗಳನ್ನ ಒದ್ದು ಒಳಗೆ ಹಾಕಿ. ಅದು ಬಿಟ್ಟು ಬರೀ ತೋರಿಕೆಗೆ ಕಾವೇರಿ ಆರತಿ ಮಾಡುವ ನಾಟಕ ಮಾಡಿದರೆ ಆ ತಾಯಿ ಕಾವೇರಿ ಮೆಚ್ಚುತ್ತಾಳಾ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.