ವಿಜಯನಗರ: ”ಜನಪರ ಆಡಳಿತ ನೀಡುತ್ತಿರುವ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ ಸುಭದ್ರ ಕಾಂಗ್ರೆಸ್ ಸರಕಾರ, ಈಗ ಬೀಳುತ್ತೆ, ಆಗ ಬೀಳುತ್ತೆ ಎನ್ನುತ್ತಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಹೈಟೆಕ್ ಜ್ಯೋತಿಷ್ಯ ಕೇಂದ್ರ ಸ್ಥಾಪಿಸಲಿ,” ಎಂದು ಕೃಷಿ ಸಚಿವ ಎನ್.ಚಲುರಾಯಸ್ವಾಮಿ ವ್ಯಂಗ್ಯವಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ಕಳೆದ ಬಾರಿ 113 ಶಾಸಕರನ್ನು ಹೊಂದಿದ್ದ ಬಿಜೆಪಿಯೇ 5 ವರ್ಷ ಆಡಳಿತ ನಡೆಸಿತ್ತು. ಇನ್ನು 136 ಶಾಸಕರನ್ನು ಹೊಂದಿರುವ ಕಾಂಗ್ರೆಸ್ ಸರಕಾರ ಬೀಳುತ್ತೆ ಎನ್ನುವುದು ಆರ್ ಅಶೋಕ ಹಾಗೂ ಬಿಜೆಪಿಯ ಇತರ ಮುಖಂಡರ ಭ್ರಮೆಯಷ್ಟೇ.
MS Dhoni News car: 3.30 ಕೋಟಿಯ ಕಾರು ಖರೀದಿಸಿದ MS ಧೋನಿ: ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್!
ಚುನಾವಣೆ ಹಾಗೂ ಮುಖ್ಯಮಂತ್ರಿ ಆಯ್ಕೆ ಸಂದರ್ಭದಲ್ಲೂ ಬಿಜೆಪಿಯವರು ಕಾಂಗ್ರೆಸ್ ಬಗ್ಗೆ ಕೊಂಕು ನುಡಿದಿದ್ದರು. ಆದರೆ, ಸಿಎಂ ಆಯ್ಕೆ ಸುಸೂತ್ರವಾಗಿ ನಡೆದಿದ್ದಲ್ಲದೇ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರ ಜೋಡಿ ಉತ್ತಮ ಆಡಳಿತ ನಡೆಸುತ್ತಿದೆ. ಬಿಜೆಪಿಯವರಿಗೆ ಮಾತನಾಡಲು ಯಾವುದೇ ವಿಷಯಗಳಿಲ್ಲ. ಹೀಗಾಗಿ ಸರಕಾರ ಬೀಳುತ್ತೆ ಅಂತ ಹೇಳಿಕೊಂಡು ಓಡಾಡುತ್ತಿದ್ದಾರೆ,” ಎಂದು ಟೀಕಿಸಿದರು.