ಟೀಮ್ ಇಂಡಿಯಾ ದಿಗ್ಗಜ ಆಟಗಾರ ರವಿಚಂದ್ರನ್ ಅಶ್ವಿನ್, ತಮ್ಮ ತವರಿನಂಗಣ ಚೆಪಾಕ್ನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಟೆಸ್ಟ್ ಕ್ರಿಕೆಟ್ ವೃತ್ತಿಬದುಕಿನ 6ನೇ ಶತಕ ಬಾರಿಸುವ ಮೂಲಕ ನೂತನ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಪ್ರವಾಸಿ ಬಾಂಗ್ಲಾದೇಶ ಎದುರು ಗುರುವಾರ (ಸೆ.19) ಶುರುವಾದ 2 ಪಂದ್ಯಗಳ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಸೋತ ಭಾರತ ಮೊದಲು ಬ್ಯಾಟ್ ಮಾಡಬೇಕಾಯಿತು. ಮೋಡ ಮುಚ್ಚೊದ ವಾತಾವರಣದ ಲಾಭ ಪಡೆ ಬಾಂಗ್ಲಾದೇಶ ಬೌಲಿಂಗ್ ಆಯ್ಕೆ ಮಾಡಿಕೊಂಡು ಟೀಮ್ ಇಂಡಿಯಾಗೆ ಆರಂಭಿಕ ಆಘಾತ ನೀಡಿತ್ತು.
MUDA Scam: ಸಿಎಂ ವಿರುದ್ಧ ಮತ್ತೊಂದು ಆರೋಪ: ಮುಡಾ ಹಣವನ್ನು ವರುಣ ಕ್ಷೇತ್ರದ ಹಳ್ಳಿಗಳ ಅಭಿವೃದ್ಧಿಗೆ ಬಳಕೆ
ಭಾರತ ತಂಡ 144 ರನ್ಗೆ 6 ವಿಕೆಟ್ ಕಳೆದುಕೊಂಡಿದ್ದ ಸಂದರ್ಭದಲ್ಲಿ ಕ್ರೀಸ್ಗೆ ಬಂದ ರವಿಚಂದ್ರನ್ ಅಶ್ವಿನ್, ಆರಂಭದಿಂದಲೇ ಶ್ರೇಷ್ಠ ಲಯದಲ್ಲಿ ಬ್ಯಾಟ್ ಬೀಸಲು ಶುರು ಮಾಡಿದರು. ಇತ್ತೀಚೆಗೆ ಟಿ20 ಕ್ರಿಕೆಟ್ನಲ್ಲಿ ತಮ್ಮ ಸ್ಪೋಟಕ ಬ್ಯಾಟಿಂಗ್ ಮೂಲಕ ಗಮನ ಸೆಳೆದಿರುವ ಅಶ್ವಿನ್, ಟೆಸ್ಟ್ ಕ್ರಿಕೆಟ್ನಲ್ಲೂ ಅದೇ ರಣನೀತಿ ಅಳವಡಿಸಿಕೊಂಡಿದ್ದಾರೆ. ತಮಿಳುನಾಡು ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡಿ ದಿಂಡಿಗಲ್ ಡ್ರಾಗನ್ಸ್ ತಂಡಕ್ಕೆ ಟ್ರೋಫಿ ಗೆದ್ದುಕೊಟ್ಟ ಅಶ್ವಿನ್, ಅದೇ ಆತ್ಮವಿಶ್ವಾಸದಲ್ಲಿ ಬಾಂಗ್ಲಾ ಬೌಲರ್ಗಳ ಎದುರು ಬ್ಯಾಟ್ ಬೀಸಿದರು.
ಅನುಭವಿ ಆಫ್ ಸ್ಪಿನ್ನರ್ ತಮ್ಮ ಈ ಮನಮೋಹಕ ಶತಕದೊಂದಿಗೆ ಟೆಸ್ಟ್ ಕ್ರಿಕೆಟ್ನಲ್ಲಿ 20ಕ್ಕೂ ಹೆಚ್ಚು ಬಾರಿ 50ಕ್ಕೂ ಹೆಚ್ಚು ರನ್ಗಳಿಸಿ, ಜೊತೆಗೆ 20ಕ್ಕೂ ಹೆಚ್ಚು ಬಾರಿ ಇನಿಂಗ್ಸ್ ಒಂದರಲ್ಲಿ 5ಕ್ಕಿಂತಲೂ ಹೆಚ್ಚು ವಿಕೆಟ್ಗಳನ್ನು ಪಡೆದ ವಿಶ್ವದ ಮೊದಲ ಆಟಗಾರ ಎಂಬ ವಿಶ್ವ ದಾಖಲೆ ನಿರ್ಮಿಸಿದ್ದಾರೆ.