ಕೆಲ ದಿನಗಳ ಕಾಲ ಸೈಲೆಂಟ್ ಆಗಿದ್ದ ನಟಿ ರಾಧಿಕಾ ಕುಮಾರಸ್ವಾಮಿ ಈಗ ಮತ್ತೆ ಎಂಟ್ರಿಕೊಟ್ಟಿದ್ದಾರೆ. ಕೆಲ ಸಮಯ ಬಣ್ಣದ ಲೋಕದಿಂದ ದೂರ ಉಳಿದ್ದ ರಾಧಿಕಾ ಕುಮಾರಸ್ವಾಮಿ ಇದೀಗ ಸೆಕೆಂಡ್ ಇನ್ಸಿಂಗ್ಸ್ ಶುರು ಮಾಡಿದ್ದಾರೆ. ಜೊತೆಗೆ ಸೋಶಿಯಲ್ ಮೀಡಿಯಾದಲ್ಲೂ ನಟಿ ಸಖತ್ ಆಕ್ಟೀವ್ ಆಗಿದ್ದಾರೆ. ಇದೀಗ ನ್ಯೂ ಇಯರ್ ಸೆಲೆಬ್ರೇಷನ್ ವಿಡಿಯೋವನ್ನು ನಟಿ ಶೇರ್ ಮಾಡಿದ್ದಾರೆ.
ಹೊಸ ವರ್ಷವನ್ನು ಸ್ಯಾಂಡಲ್ವುಡ್ ನಟಿ ರಾಧಿಕಾ ಕುಮಾರಸ್ವಾಮಿ ಖುಷಿಯಿಂದಲೇ ಸ್ವಾಗತಿಸಿದ್ದಾರೆ. ಹೊಸ ವರ್ಷ 2025 ಇಲ್ಲಿದೆ. ನಿಮ್ಮ ಕನಸುಗಳನ್ನು ನನಸಾಗಿಸಲು ನೂರಾರು ದಿನಗಳಿವೆ. ಕಹಿ ನೆನಪು ಮರೆತು, ಸಿಹಿ ಕನಸು ಹೊತ್ತು ಹೊಸ ವರ್ಷವನ್ನು ಸ್ವಾಗತಿಸೋಣ ಎಂದು ರಾಧಿಕಾ ಕುಮಾರಸ್ವಾಮಿ ಬರೆದುಕೊಂಡಿದ್ದಾರೆ.
ಪಾರ್ಟಿಯಲ್ಲಿ ನಟಿ, ನಿರ್ಮಾಪಕಿ ರಾಧಿಕಾ ಕುಮಾರಸ್ವಾಮಿ ಬ್ಲ್ಯಾಕ್ ಡ್ರೆಸ್ನಲ್ಲಿ ಮಿಂಚುತ್ತಿದ್ರು. ಕೇಕ್ ಕಟ್ ಮಾಡಿದ ನಟಿ ಹೊಸ ವರ್ಷವನ್ನು ಖುಷಿಯಿಂದ ಬರಮಾಡಿಕೊಂಡ್ರು. ಸ್ಟೈಲಿಶ್ ಡ್ರೆಸ್ ಧರಿಸಿದ ರಾಧಿಕಾ ಫೋಟೋಗೆ ಬಗೆ ಬಗೆ ಪೋಸ್ ಕೊಟ್ಟಿದ್ದಾರೆ. ವಿಡಿಯೋಗೆ ಲೈಕ್ ಗಳ ಸುರಿಮಳೆ ಆಗಿದ್ದು ನಟಿಯ ಸೌಂದರ್ಯವನ್ನು ಅಭಿಮಾನಿಗಳು ಹೊಗಳಿದ್ದಾರೆ.