ಸ್ಯಾಂಡಲ್ವುಡ್ನ ಮುದ್ದಾದ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಪ್ರೇಮಿಗಳ ದಿನವನ್ನು ಸೆಲೆಬ್ರೇಟ್ ಮಾಡಿದ್ದಾರೆ. ವ್ಯಾಲೆಂಟೈನ್ ದಿನದ ಸುಂದರ ಫೋಟೋಗಳನ್ನು ನಟಿ ರಾಧಿಕಾ ಪಂಡಿತ್ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ದೂರದ ಊರಿನಲ್ಲಿರುವ ಯಶ್ ದಂಪತಿ ಮಕ್ಕಳ ಜೊತೆ ಸಮಯ ಕಳೆದಿದ್ದಾರೆ. ಗೋಡೆಯ ಮೇಲೆ ಹಾರ್ಟ್ ಬಲೂನ್ ಹಾಕಿ ಕಲರ್ಫುಲ್ ಡ್ರೆಸ್ ಧರಿಸಿ ಮಿಂಚಿದ್ದಾರೆ. ಯಶ್ ಮತ್ತು ರಾಧಿಕಾ ಇಬ್ಬರು ಕಣ್ಣಿಗೆ ಕುಲ್ಲಿಂಗ್ ಗ್ಲ್ಯಾಸ್ ತೊಟ್ಟು ಸ್ಟೈಲೀಶ್ ಆಗಿ ಕಾಣಿಸಿಕೊಂಡಿದ್ದಾರೆ. ನನ್ನ ಶಾಶ್ವತ ಪ್ರೇಮಿಗಳೊಂದಿಗೆ ವ್ಯಾಲೆಂಟೈನ್ಸ್ ಡೇ ಲಂಚ್ ಎಂದು ನಟಿ ರಾಧಿಕಾ ಪಂಡಿತ್ ಬರೆದುಕೊಂಡಿದ್ದಾರೆ.
‘ಟಾಕ್ಸಿಕ್’ ಚಿತ್ರದ ಶೂಟಿಂಗ್ಗೆ ಬ್ರೇಕ್ ನೀಡಿರುವ ಯಶ್ ತಮ್ಮ ಕುಟುಂಬದ ಜೊತೆ ಸಮಯ ಕಳೆಯುತ್ತಿದ್ದಾರೆ. ತಾವು ಎಷ್ಟೇ ಬ್ಯುಸಿ ಇದ್ದರು ಯಶ್ ಸದಾ ತಮ್ಮ ಕುಟುಂಬಕ್ಕಾಗಿ ಸಮಯವನ್ನು ಮಿಸಲಿಡುತ್ತಾರೆ.