ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಸಿನಿಮಾಗಳ ಮೂಲಕ ಛಾಪೂ ಮೂಡಿಸಿರುವ ಸಿಂಪಲ್ ಸುನಿ ಹಾಗೂ ದೊಡ್ಮನೆ ಕುಡಿ ವಿನಯ್ ರಾಜ್ ಕುಮಾರ್ ಕಾಂಬಿನೇಷನ್ ನಲ್ಲಿ ಬರ್ತಿರುವ ಬಹುನಿರೀಕ್ಷಿತ ಸಿನಿಮಾ ಒಂದು ಸರಳ ಪ್ರೇಮ ಕಥೆ. ಪೋಸ್ಟರ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ ಚಿತ್ರದ ಶೂಟಿಂಗ್ (Shooting) ಕಂಪ್ಲೀಟ್ ಆಗಿದೆ. ಮೈಸೂರಿನಲ್ಲಿ ಕೊನೆಯ ಹಂತದ ಚಿತ್ರೀಕರಣ ಮುಗಿಸಿ ಚಿತ್ರತಂಡ ಕುಂಬಳಕಾಯಿ ಹೊಡೆದಿದೆ. ವಿಶೇಷ ಅಂದರೆ ವಿನಯ್ ಸಿನಿಮಾದಲ್ಲಿ ಅಪ್ಪ ರಾಘಣ್ಣ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ. ಚಿತ್ರೀಕರಣ ಮುಗಿಸಿ ಮಾಧ್ಯಮದವರೊಂದಿಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.
ನಿರ್ದೇಶಕ ಸುನಿ (Simple Suni) ಮಾತನಾಡಿ, ಟೈಟಲ್ ಹೇಳುವಂತೆ ಇದೊಂದು ಸರಳ ಪ್ರೇಮಕಥೆ. ಸಂಗೀತ ನಿರ್ದೇಶಕನ ಪ್ರೇಮಕಥೆಯಾಗಿರುವುದರಿಂದ ಸಂಗೀತಮಯ ಜರ್ನಿ. ಅಂದರೆ ನಮ್ಮ ಆಲ್ಬಂ ತೆಗೆದುಕೊಂಡು ಹಾಕಿಕೊಂಡರೆ ಮೈಸೂರಿನಿಂದ ಬೆಂಗಳೂರು ತಲುಪುತ್ತೀರಾ. ಒಟ್ಟು ಸಿನಿಮಾದಲ್ಲಿ 11 ಸಾಂಗ್ ಗಳು ಇವೆ. ಎಲ್ಲಾ ಪ್ರಕಾರದ ಸಂಗೀತಗಳು ಹಾಡಿನಲ್ಲಿದೆ. ಖುಷಿ ವಿಷಯ ಏನಂದರೆ ಮೊದಲ ದಿನ ವಿನಯ್ ಸರ್ ಚಿತ್ರೀಕರಣ ಮಾಡಿದೆ. ಕೊನೆಯ ದಿನ ರಾಘಣ್ಣ ಅವರು ಚಿತ್ರೀಕರಣ ಮಾಡಿದ್ದೇನೆ. ದೊಡ್ಮನೆ ಕುಟುಂಬದ ಜೊತೆ ಕೆಲಸ ಮಾಡಿರುವುದು ಖುಷಿ ಕೊಟ್ಟಿದೆ. ಒಟ್ಟು 83 ದಿನ ಶೂಟ್ ನಡೆಸಿದ್ದೇವೆ. ಮುಂಬೈ, ರಾಜಸ್ತಾನ, ಬೆಂಗಳೂರು, ಮೈಸೂರಿನಲ್ಲಿ ಚಿತ್ರೀಕರಣ ಮಾಡಿದ್ದೇನೆ ಎಂದು ಮಾಹಿತಿ ನೀಡಿದರು.
ರಾಘಣ್ಣ (Raghavendra Rajkumar) ಮಾತನಾಡಿ, ಸಿಂಪಲ್ ಆಗಿ ಒಂದ್ ಲವ್ ಸ್ಟೋರಿ ಸಿನಿಮಾ ನೋಡಿದ್ಮೇಲಿನಿಂದ ಸುನಿ ಅವರ ಸಿನಿಮಾಗಳಲ್ಲಿ ನಟಿಸಬೇಕು ಎನಿಸಿತ್ತು. ನನ್ನ ಮಗ ನಟಿಸುತ್ತಿದ್ದೇನೆ ಎಂದಾಗ ದೊಡ್ಡ ವಿಷಯ ಎನಿಸಿತು. ನನಗೆ ಟೈಟಲ್ ತುಂಬಾ ಇಷ್ಟವಾಯಿತು. ಸಂಗೀತ ಅಂದರೆ ಏಳು ಸ್ವರಗಳು ಇರುತ್ತವೆ. ನನ್ನ ಒಂದು ಸ್ವರವಾಗಿ ಸೇರಿಸಿಕೊಂಡಿದ್ದಾರೆ. ಅದು ನನಗೆ ಸಂತೋಷ ಕೊಡುತ್ತದೆ. ಕುಂಬಳಕಾಯಿ ಒಡೆದಿದ್ದಾರೆ. ಪೋಸ್ಟ್ ಪ್ರೊಡಕ್ಷನ್ ಚೆನ್ನಾಗಿ ಆಗಲಿ. ಸಿನಿಮಾ ನಿಮ್ಮ ಮುಂದೆ ಬರಲಿ. ನಿಮ್ಮ ಬೆಂಬಲ ಇರಲಿದೆ ಎಂದರು.