ಮಂಗಳೂರು: ಬಿಜೆಪಿ ಶಾಸಕ ಡಾ. ವೈ ಭರತ್ ಶೆಟ್ಟಿ ಮೇಲೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಸಂಭಂಧ ಎಫ್ಐಆರ್ ದಾಖಲಿಸಲಾಗಿದೆ. ಪಾಲಿಕೆ ಸದಸ್ಯ ಕಾಂಗ್ರೆಸ್ನ ಅನಿಲ್ ಕುಮಾರ್ ನೀಡಿದ್ದ ದೂರಿನ ಆಧಾರದಲ್ಲಿ ಎಫ್ಐಆರ್ ದಾಖಲಿಸಲಾಗಿದೆ. BNS 351(3), 353 ಸೆಕ್ಷನ್ ಅಡಿ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Ration Card: ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್! BIG ಅಪ್ಡೇಟ್ ಇಲ್ಲಿದೆ
ಈ ಮಧ್ಯೆ, ಭರತ್ ಶೆಟ್ಟಿ ಹೇಳಿಕೆ ಖಂಡಿಸಿ ಮಂಗಳೂರು ಪಾಲಿಕೆ ಎದುರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ. ಪ್ರತಿಭಟನೆ ಮುಗಿದ ಬೆನ್ನಲ್ಲೇ ಏಕಾಏಕಿ ರಸ್ತೆಗೆ ನುಗ್ಗಿದ ಕಾರ್ಯಕರ್ತರು ರಸ್ತೆ ತಡೆ ಮಾಡಿದ್ದಾರೆ. ರಸ್ತೆ ತಡೆಯಿಂದ ಲಾಲ್ ಭಾಗ್ ಸರ್ಕಲ್ ಬಳಿ ಟ್ರಾಫಿಕ್ ಜಾಂ ಉಂಟಾಯಿತು. ಬಳಿಕ ರಸ್ತೆ ತಡೆ ನಡೆಸಿದ ನಾಯಕರು ಹಾಗೂ ಕಾರ್ಯಕರ್ತರನ್ನು ಪೊಲೀಸರು ಪಕ್ಕಕ್ಕೆ ಸರಿಸಿದರು.