ನವದೆಹಲಿ: ರಾಹುಲ್ ಗಾಂಧಿ ಅವರು ತಮ್ಮ ತಾಯಿ ಪ್ರತಿನಿಧಿಸುತ್ತಿದ್ದ ರಾಯ್ಬರೇಲಿ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ. ಕಾಂಗ್ರೆಸ್ ಪಕ್ಷದ ಈ ನಿರ್ಧಾರಕ್ಕೆ ಪ್ರಧಾನಿ ಮೋದಿ ಅವರು ವ್ಯಂಗ್ಯವಾಡಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸೋಲಿನ ಭಯದಿಂದ ಅಮೇಥಿ ಕ್ಷೇತ್ರದಿಂದ ಓಡಿ ಹೋದರು ಎಂದು ಹೇಳಿದ್ದಾರೆ. ನಾನು ಕಾಂಗ್ರೆಸ್ ನಾಯಕರಿಗೆ ಹೇಳಲು ಇಚ್ಛಿಸುತ್ತೇನೆ. ನೀವು ಹೆದರಬೇಡಿ, ಓಡಿ ಹೋಗಬೇಡಿ ಎಂದು ಪ್ರಧಾನಿ ಮೋದಿ ವ್ಯಂಗ್ಯವಾಡಿದರು.
Car airbags: ನಿಮ್ಮ ಕಾರಿನಲ್ಲಿರುವ ಏರ್ʼಬ್ಯಾಗ್ ಅಸಲಿಯೋ, ನಕಲಿಯೋ ತಿಳಿಯುವುದೇಗೆ ಗೊತ್ತಾ..? ಈ ಸ್ಟೋರಿ ನೋಡಿ
ಕೇಂದ್ರದ ಎನ್ಡಿಎ ಸರ್ಕಾರ ತನ್ನ ರಾಜಕೀಯ ವಿರೋಧಿಗಳ ವಿರುದ್ಧ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಕಿರುಕುಳ ನೀಡುತ್ತದೆ ಎಂದು ಆರೋಪಿಸುವ ಸಂದರ್ಭಗಳಲ್ಲಿ ರಾಹುಲ್ ಗಾಂಧಿ ಅವರು ‘ಹೆದರಬೇಡಿ’ ಎಂಬ ಪದ ಪ್ರಯೋಗ ಮಾಡುತ್ತಿದ್ದರು. ಇದೀಗ ಈ ಪದವನ್ನೇ ಪ್ರಧಾನಿ ಮೋದಿ ರಾಹುಲ್ ಗಾಂಧಿ ವಿರುದ್ಧ ಬಳಕೆ ಮಾಡಿದ್ದಾರೆ.