ಬೆಂಗಳೂರು: ಬೆಂಗಳೂರಿನಲ್ಲಿ ದಾಖಲಾಗಿರುವ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಲು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನವದೆಹಲಿಯಿಂದ ಬೆಂಗಳೂರಿಗೆ ಬಂದಿದ್ದಾರೆ. 2023ರ ರಾಜ್ಯ ವಿಧಾನಸಭಾ ಚುನಾವಣೆಗೂ ಮುನ್ನ ಪ್ರಮುಖ ಪತ್ರಿಕೆಗಳಲ್ಲಿ ಅವಹೇಳನಕಾರಿ ಜಾಹೀರಾತು ಪ್ರಕಟಿಸಿದ್ದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಬಿಜೆಪಿ ಹೂಡಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಜೂನ್ 7 ರಂದು,
ಅಂದರೆ ಇಂದು ರಾಹುಲ್ ಗಾಂಧಿ ನ್ಯಾಯಾಲಯದ ಎದುರು ಹಾಜರಾಗುವಂತೆ ಕೋರ್ಟ್ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಅವರು ಇಂದು ಬೆಳಗ್ಗೆಯೇ ನವದೆಹಲಿ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನನಿಲ್ದಾಣದಿಂದ ಬೆಂಗಳೂರಿಗೆ ಪ್ರಯಾಣ ಮಾಡಿದ್ದು, ಈಗ ಬೆಂಗಳೂರು ತಲುಪಿದ್ದಾರೆ.
High Court: ನಿರುದ್ಯೋಗದ ನೆಪ ಹೇಳಿ ಜೀವನಾಂಶದಿಂದ ಪತಿ ತಪ್ಪಿಸಿಕೊಳ್ಳಲಾಗದು: ಹೈಕೋರ್ಟ್ ಆದೇಶ
ದೆಹಲಿಯಿಂದ ಬೆಂಗಳೂರಿಗೆ ಬಂದಿಳಿದ ಕಾಂಗ್ರೆಸ್ ರಾಷ್ಟ್ರೀಯ ವರಿಷ್ಠ ರಾಹುಲ್ ಗಾಂಧಿ ಅವರನ್ನು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್ ಅವರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು. ಇನ್ನೂ ಶಾಂಗ್ರಿಲಾ ಹೊಟೇಲ್ ಗೆ ಒಂದೇ ಕಾರಿನಲ್ಲಿ ರಾಹುಲ್ ಗಾಂಧಿ ಜೊತೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಆಗಮಿಸಿದ್ದಾರೆ.