ಬೆಂಗಳೂರು: ರಾಹುಲ್ ಗಾಂಧಿಯವರು ಹಿಂದೂಗಳ ಕ್ಷಮೆ ಕೇಳಬೇಕು ಹಾಗೆ ಹಿಂದೂಗಳ ತೇಜೋವಧೆಗೆ ಸದನ ಬಳಸಿಕೊಳ್ಳುತ್ತಿರುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದರು.
ದರ್ಶನ್ ಫ್ಯಾನ್ಸ್ಗೆ ಕಾನೂನು ಕಂಟಕ: ನಂಬರ್ ಪ್ಲೇಟ್ ಚೇಂಚ್ ಮಾಡಿದ್ರಾ ಅಭಿಮಾನಿಗಳು!
![Demo](https://ainlivenews.com/wp-content/uploads/2023/12/spoorthi-1.jpg)
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದಲ್ಲಿ ಮಾನ್ಯ ನರೇಂದ್ರ ಮೋದಿಯವರ ನೇತೃತ್ವದ ಬಿಜೆಪಿ ಈ ದೇಶವನ್ನು ಮುನ್ನಡೆಸುತ್ತಿದೆ. ಮತ್ತೊಂದು ಕಡೆ ಸತತ 3 ಬಾರಿ ಹೇಗಾದರೂ ಮಾಡಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರಯತ್ನಿಸಿ ಕಾಂಗ್ರೆಸ್ ಪಕ್ಷ, ಅದರ ನಾಯಕ ರಾಹುಲ್ ಗಾಂಧಿಯವರು ಸಂಪೂರ್ಣವಾಗಿ ವಿಫಲವಾಗಿದ್ದಾರೆ. ವಿಪಕ್ಷ ನಾಯಕನ ಸ್ಥಾನ ಜವಾಬ್ದಾರಿ ಅವರಿಗೆ ಮೊದಲ ಬಾರಿಗೆ ಲಭಿಸಿದೆ. ನಿನ್ನೆ ಸಂಸತ್ತಿನಲ್ಲಿ ರಾಹುಲ್ ಗಾಂಧಿಯವರು ವಿಪಕ್ಷ ನಾಯಕನಾಗಿ ಮಾಡಿದ ಚೊಚ್ಚಲ ಭಾಷಣ ಸುಳ್ಳು, ನಿರಾಶೆ, ಆಧಾರರಹಿತ ಆರೋಪಗಳಿಂದ ಕೂಡಿತ್ತು ಎಂದು ಆಕ್ಷೇಪಿಸಿದರು ಎಂದರು.
ಬೆಂಗಳೂರಲ್ಲಿ ತಲೆ ಎತ್ತಿ ನಿಂತಿದೆ ಮಲ್ಟಿ ಲೆವಲ್ ಪಾರ್ಕಿಂಗ್ ಕಟ್ಟಡ: ವಾಹನಗಳೇಕೆ ಬರ್ತಿಲ್ಲ!?
ಸುಳ್ಳು ಹೇಳಿ ಅಕ್ಷಮ್ಯ ಅಪರಾಧ ಮಾಡಿದ್ದಾರೆ. ರಾಹುಲ್ ಗಾಂಧಿ ದೇಶದ ಹಿಂದೂಗಳ ಕ್ಷಮೆ ಯಾಚಿಸಬೇಕು. ಅವರನ್ನು ಸುಳ್ಳು ಹೇಳಿ ಓಡಿಹೋಗಲು ಬಿಡಲ್ಲ. ಸದನದಲ್ಲಿ ಹಿಂದೂಗಳಿಗೆ ರಾಹುಲ್ ಗಾಂಧಿ ಅಪಮಾನ ಮಾಡಿದ್ದಾರೆ. ನೂರರ ಗಡಿ ದಾಟಲಾಗದ ಕಾಂಗ್ರೆಸ್ ನಾಯಕ ರಾಹುಲ್ ವಿಪಕ್ಷ ನಾಯಕ ಆಗಿ ಮನಸೋ ಇಚ್ಛೆ ಮಾತಾಡಲು ಸದನ ಬಳಸಿಕೊಳ್ತಿದ್ದಾರೆ. ಹಿಂದೂಗಳ ತೇಜೋವಧೆಗೆ ಸದನ ಬಳಸಿಕೊಳ್ತಿರೋದು ಸರಿಯಲ್ಲ ಎಂದರು.
![](https://ainlivenews.com/wp-content/uploads/2024/01/Ad-Banner-copy-scaled.jpg)