ಬೆಂಗಳೂರು:- ಬೆಂಗಳೂರಿನ ಕೋರ್ಟ್ನಲ್ಲಿ ರಾಹುಲ್ ಗಾಂಧಿ ವಿಚಾರಣೆ ಎದುರಿಸಲಿದ್ದಾರೆ.
ಬಿಜೆಪಿ ಸಲ್ಲಿಸಿದ್ದ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂ.1ರಂದು ವಿಚಾರಣೆ ನಡೆಸಿದ್ದ 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಜಾಮೀನು ಮಂಜೂರು ಮಾಡಿತ್ತು. ಅಲ್ಲದೇ ಗೈರಾಗಿದ್ದ ರಾಹುಲ್ ಗಾಂಧಿಯವರಿಗೆ ಜೂನ್ 7 ರಂದು ಕಡ್ಡಾಯವಾಗಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗಬೇಕೆಂದು ಆದೇಶಿಸಿತ್ತು
ಈ ಹಿಂದೆ ಸಿದ್ದರಾಮಯ್ಯ, ಶಿವಕುಮಾರ್ ಮತ್ತು ರಾಹುಲ್ ಗಾಂಧಿ ಅವರಿಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿತ್ತು. ಈ ಕಾರಣಕ್ಕೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಕೋರ್ಟ್ ಹಾಜರಾಗಿದ್ದರು. ಆದರೆ ರಾಹುಲ್ ಗಾಂಧಿಯವರು ಗೈರಾಗಿದ್ದರು.
ವಿಚಾರಣೆಯ ಸಂದರ್ಭದಲ್ಲಿ ಗಾಂಧಿ ಪರ ವಕೀಲರು ಐ.ಎನ್.ಡಿ.ಐ.ಎ ಮೈತ್ರಿಕೂಟದ ಸಭೆಯಲ್ಲಿ ಭಾಗಿಯಾಗಿರುವುದರಿಂದ ಅವರಿಗೆ ಹಾಜರಾತಿಯಿಂದ ವಿನಾಯಿತಿ ನೀಡುವಂತೆ ಕೋರಿದ್ದರು. ಆದರೆ ನ್ಯಾಯಾಲಯವು ಮನವಿಯನ್ನು ನಿರಾಕರಿಸಿತ್ತು. ಮಧ್ಯಾಹ್ನದ ವಿಚಾರಣೆಯನ್ನು ಮುಂದೂಡಿ ನಂತರ ಜೂನ್ 7 ರಂದು ಖುದ್ದು ಹಾಜರಾಗಬೇಕೆಂದು ಸೂಚಿಸಿ ವಿಚಾರಣೆಯನ್ನು ಮುಂದೂಡಿತ್ತು.