ವಿಜಯಪುರ:- 2024 ರ ಲೋಕಸಭಾ ಚುನಾವಣೆ ಹಿನ್ನೆಲೆ, ಇಂದು ರಾಜ್ಯಕ್ಕೆ AICC ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಭೇಟಿ ನೀಡಲಿದ್ದಾರೆ.
ಕೋಲಾರದಲ್ಲಿ ಮತದಾನ ಪ್ರಕ್ರಿಯೆ ಆರಂಭ: ಸರತಿ ಸಾಲಲ್ಲಿ ನಿಂತು ಹಕ್ಕು ಚಲಾಯಿಸುತ್ತಿರುವ ಜನತೆ!
ಇಂದು ವಿಜಯಪುರ ನಗರದಲ್ಲಿ ಕೈ ಅಭ್ಯರ್ಥಿ ರಾಜು ಆಲಗೂರ ಪರವಾಗಿ ರಾಗಾ ಪ್ರಚಾರಕ್ಕೆ ಆಗಮಿಸಲಿದ್ದಾರೆ. ರಾಗಾ ಆಗಮನ ಹಿನ್ನೆಲೆ, ಕೈ ನಾಯಕರು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಸೋಲಾಪೂರ ರಸ್ತೆಯಲ್ಲಿರುವ ಬಿ ಎಲ್ ಡಿ ಇ ಕ್ಯಾಂಪಸ್ ನಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದೆಸಚಿವ ಎಂಬಿ ಪಾಟೀಲ್ ಹಾಗೂ ಶಿವಾನಂದ ಪಾಟೀಲ್ ರಿಂದ ಸ್ಥಳ ಪರಿಶೀಲನೆ ಮಾಡಲಾಗಿದ್ದು, ಎಸ್ ಪಿ ಋಷಿಕೇಶ ಸೋನಾವಣೆ ನೇತೃತ್ವದಲ್ಲಿ ಬಿಗಿ ಪೋಲಿಸ್ ಬಂದೋ ಬಸ್ತ ಮಾಡಲಾಗಿದೆ.
ಮದ್ಯಾಹ್ನ 1 ಗಂಟೆಗೆ ರಾಹುಲ್ ಗಾಂಧಿ ಆಗಮಿಸಲಿದ್ದು, ಬಹಿರಂಗ ಸಮಾವೇಶದಲ್ಲಿ ಸುಮಾರು 50 ಸಾವಿರ ಜನ ಸೇರುವ ನಿರಿಕ್ಷೆ ಇದೆ.