ರಾಯಬಾಗ:- ರಾಮ ಜನ್ಮಭೂಮಿ ಹೋರಾಟ ಕಾರ್ಯಕರ್ತನ ಬಂಧನ ಹಿನ್ನೆಲೆ, ಗಣಿನಾಡು ಬಳ್ಳಾರಿಯಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ.
ಬಳ್ಳಾರಿಯ ರಾಯಲ್ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರೊಟೇಸ್ಟ್ ನಡೆಸಲಾಗಿದ್ದು, ಬಂಧನ ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದಾರೆ. ಬಳ್ಳಾರಿ ಜಿಲ್ಲಾ ಬಿಜೆಪಿ ಘಟಕದಿಂದ ಪ್ರತಿಭಟನೆ ನಡೆಸಲಾಗಿದ್ದು, ಹಿಂದೂ ವಿರೋಧಿ ಸರ್ಕಾರ, ಸಿಎಂ ಸಿದ್ದರಾಮಯ್ಯ ಹಿಂದೂ ವಿರೋಧಿ ಎಂದು ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ.