ಬೆಂಗಳೂರು;- ಕಳ್ಳನೊಂದಿಗೆ ಶಾಮೀಲಾಗಿ ರೈಲುಗಳಲ್ಲಿ ಕಳ್ಳತನ ಮಾಡುತ್ತಿದ್ದ ರೈಲ್ವೆ ಹೆಡ್ಕಾನ್ಸ್ಟೇಬಲ್ ಅರೆಸ್ಟ್ ಆಗಿದ್ದಾರೆ. ಚಿಕ್ಕಬಳ್ಳಾಪುರ ರೈಲ್ವೆ ಹೊರ ಪೊಲೀಸ್ ಠಾಣೆಯಲ್ಲಿ ಹೆಡ್ಕಾನ್ಸ್ಟೇಬಲ್ ಆಗಿರುವ ಸಿದ್ದರಾಮರೆಡ್ಡಿ ಹಾಗೂ ಖದೀಮ ಸಾಬಣ್ಣ ಬಂಧಿತರು
ಪೊಲೀಸ್ ಕಸ್ಟಡಿ ಪಡೆದು ಹೆಚ್ಚಿನ ವಿಚಾರಣೆಗೊಳಪಡಿಸಲಾಗಿದೆ. 2011ರ ಬ್ಯಾಚ್ ಸಿಬ್ಬಂದಿಯಾಗಿದ್ದ ಸಿದ್ದರಾಮರೆಡ್ಡಿ, ರೈಲ್ವೇ ಹೆಡ್ಕಾನ್ಸ್ಟೇಬಲ್ ಆಗಿ ರಾಯಚೂರಿನಲ್ಲಿ ಸೇವೆಗೆ ಸೇರಿದ್ದರು. ಸಾಬಣ್ಣ ಸಹ ರಾಯಚೂರು ಮೂಲದವನಾಗಿದ್ದು, ಇಬ್ಬರ ನಡುವೆ ಪರಿಚಯವಾಗಿತ್ತು. ಕಾಲ ಕ್ರಮೇಣ ಹೆಡ್ಕಾನ್ಸ್ಟೇಬಲ್ ಆಗಿ ಬಡ್ತಿ ಪಡೆದು ಸಿದ್ದರಾಮ ಬೆಂಗಳೂರು ನಗರಕ್ಕೆ ವರ್ಗಾವಣೆ ಮಾಡಿಸಿಕೊಂಡಿದ್ದ. ಮತ್ತೊಂದೆಡೆ ಸಾಬಣ್ಣ ಬೆಂಗಳೂರಿನ ಚಿಕ್ಕಬಾಣವಾರ ಬಳಿ ಮನೆ ಮಾಡಿಕೊಂಡಿದ್ದ. ಈ ಮಧ್ಯೆ ಇಬ್ಬರ ನಡುವೆ ಸಂಪರ್ಕ ಬೆಸೆದುಕೊಂಡಿದ್ದರು.