ಬೆಂಗಳೂರು:- ನಗರದಲ್ಲಿ ಇನ್ನೂ ಎರಡು ದಿನ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಬೆಂಗಳೂರಲ್ಲಿ ಇನ್ನೂ ಕೆಲವು ದಿನ ಸಾಧಾರಣ ಹಾಗೂ ಮಧ್ಯಮ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ನೀಡಿದೆ. ಮಾರ್ಚ್ 14ರವರೆಗೂ ಬೆಂಗಳೂರು ನಗರಕ್ಕೆ ಹೈಅಲರ್ಟ್ ನೀಡಲಾಗಿದೆ.
ಹಿರಿಯ ಹವಾಮಾನ ವಿಜ್ಞಾನಿ ಸಿ.ಎಸ್ ಪಾಟೀಲ್ ಅವರು ಕರ್ನಾಟಕದಲ್ಲಿ ಇನ್ನೂ ಮೂರು ದಿನ ಜೋರಾದ ಬಿರುಗಾಳಿ, ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. ಗಾಳಿಯ ವೇಗೆ ಗಂಟೆಗೆ 30 ಕಿಲೋ ಮೀಟರ್ ವೇಗದಲ್ಲಿರಲಿದೆ. ಬೆಂಗಳೂರಲ್ಲಿ ಮುಂದಿನ ವಾರವೂ ಸಾಧಾರಣ ಮಳೆ ಮುಂದುವರಿಯಲಿದ್ದು, ವಾತಾವರಣದಲ್ಲಿ ಉಷ್ಣಾಂಶ ಕುಸಿಯಲಿದೆ ಎಂದಿದ್ದಾರೆ.