ಬೆಂಗಳೂರು:- ಕರ್ನಾಟಕದ ಕೆಲವೆಡೆ ಮಾತ್ರ ಮಳೆಯ ಅಲರ್ಟ್ ನೀಡಲಾಗಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು IMD ನಿರ್ದಿಷ್ಟವಾಗಿ ಹೈ ಅಲರ್ಟ್ ಘೋಷಿಸಿದೆ. ಉತ್ತರ ಒಳನಾಡಿನ ಪ್ರದೇಶಗಳಲ್ಲಿ, ಬೆಳಗಾವಿ, ಬಾಗಲಕೋಟೆ, ಕಲಬುರಗಿ, ವಿಜಯಪುರ ಮತ್ತು ಕೊಪ್ಪಳ ಈ ಅವಧಿಯಲ್ಲಿ ಗಣನೀಯ ಮಳೆಯಾಗುವ ನಿರೀಕ್ಷೆಯಿದೆ.
ಭಾರತೀಯ ಹವಾಮಾನ ಇಲಾಖೆ (IMD) ಕರ್ನಾಟಕಕ್ಕೆ ಹವಾಮಾನ ಎಚ್ಚರಿಕೆಯನ್ನು ನೀಡಿದೆ. ಜೂನ್ 20 ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿರಂತರ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಪ್ರದೇಶಗಳಲ್ಲಿ ಗುಡುಗು ಸಹಿತ ಭರ್ಜರಿ ಮಳೆಯಾಗುವ ನಿರೀಕ್ಷೆಯಿದೆ. ಈ ಭಾಗದಲ್ಲಿ ಗಾಳಿಯ ವೇಗ ಗಂಟೆಗೆ 40-50 ಕಿ.ಮೀ. ಇರಲಿದೆ ಎಂದು ಎಚ್ಚರಿಸಿದೆ ಹವಾಮಾನ ಇಲಾಖೆ. ರಾಜ್ಯ ರಾಜಧಾನಿ ಬೆಂಗಳೂರು ನಗರದಲ್ಲಿ ಮುಂಗಾರು ಮಳೆಯಲ್ಲಿ ಇಳಿಮುಖವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಈಗ ವರದಿ ಮಾಡಿದೆ