ಚಿತ್ರದುರ್ಗ:- ಬಿಟ್ಟು ಬಿಡದೆ ಸುರಿದ ಮಳೆಯಿಂದ ಮನೆಗೋಡೆ ಕುಸಿದು 75 ವರ್ಷದ ವೃದ್ಧೆ ಸಾವನ್ನಪ್ಪಿದ ಘಟನೆ ಈಚಲ ನಾಗೇನಹಳ್ಳಿ ಗ್ರಾಮದಲ್ಲಿ ಜರುಗಿದೆ.
ಮೃತ ದುರ್ದೈವಿಯನ್ನು ರಂಗಮ್ಮ ಎಂದು ಗುರುತಿಸಲಾಗಿದೆ. ಮನೆ ಹಳೆಯದಾಗಿದ್ದು, ನಿರಂತರ ಮಳೆಗೆ ನೆನೆದು ಗೋಡೆ ಕುಸಿದಿದೆ. ಈ ವೇಳೆ ಮನೆಯೊಳಗಿದ್ದ ವೃದ್ಧೆ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಚಿತ್ರದುರ್ಗ ಕ್ಷೇತ್ರದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಭೇಟಿ ನೀಡಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು
ಮೃತ ವೃದ್ಧೆ ಕುಟುಂಬಕ್ಕೆ ಕೇಂದ್ರ ಸರ್ಕಾರದ ಎಸ್ಡಿಆರ್ಎಫ್ ಮಾರ್ಗಸೂಚಿಯಂತೆ ಪ್ರಕೃತಿ ವಿಕೋಪ ನಿಧಿಯಿಂದ 4 ಲಕ್ಷ ರೂ. ಮತ್ತು ಹೆಚ್ಚುವರಿಯಾಗಿ 1 ಲಕ್ಷ ರೂ. ಸೇರಿದಂತೆ ಒಟ್ಟು 5 ಲಕ್ಷ ರೂ. ಹಣವನ್ನು ವಾರಸುದಾರರಿಗೆ ವಿತರಿಸಿದರು.
ಮೃತ ವೃದ್ಧೆ ರಂಗಮ್ಮಗೆ ಇಬ್ಬರು ಹೆಣ್ಣು, ಇಬ್ಬರು ಗಂಡು ಮಕ್ಕಳಿದ್ದಾರೆ. ವೃದ್ಧೆ ತನ್ನ ಮಗನೊಂದಿಗೆ ಈ ಮನೆಯಲ್ಲಿ ವಾಸವಾಗಿದ್ದರು ಎನ್ನಲಾಗಿದೆ.