ಉತ್ತರ ಕನ್ನಡ:- ರಾಜ್ಯದಲ್ಲಿ ವರುಣನ ಆರ್ಭಟ ಜೋರಾಗಿದೆ. ಅದರಂತೆ ವರುಣನಿಂದ ಸಾಕಷ್ಟು ಅವಾಂತರಗಳು ಕೂಡ ಹೆಚ್ಚಾಗಿದೆ.
ಅದರಂತೆ ಅಂಕೋಲಾ ಹೆದ್ದಾರಿಯಲ್ಲಿ ಕುಸಿದ ಗುಡ್ಡದಿಂದ 6 ಜನರು ಮೃತದೇಹಗಳು ಪತ್ತೆ ಆಗಿದ್ದು, ಶೋಧ ಕಾರ್ಯ ಮುಂದುವರಿದಿದೆ.
ಘಟನೆಯಲ್ಲಿ ಹೆದ್ದಾರಿ ಪಕ್ಕದಲ್ಲಿ ಹೋಟೆಲ್ ಇಟ್ಟುಕೊಂಡಿದ್ದ ಒಂದೇ ಕುಟುಂಬದ ಲಕ್ಷ್ಮಣ್ ನಾಯ್ಕ್, ಪತ್ನಿ ಶಾಂತಿ, ಪುತ್ರಿ ಆವಾತಿಕಾ ಹಾಗೂ ಪುತ್ರ ರೋಷನ್ ಸೇರಿ ಟ್ರಕ್ ಚಾಲಕನ ಶವ ಪತ್ತೆಯಾಗಿದೆ. ಈ ನಾಲ್ವರ ಮೃತದೇಹಗಳು ಗೋಕರ್ಣ ಸಮೀಪ ಸಿಕ್ಕಿದೆ. ಇನ್ನು ಕುಮಟಾ ಸರ್ಕಾರಿ ಅಸ್ಪತ್ರೆಯ ಶವಾಗಾರದಲ್ಲಿ ಮೃತ ದೇಹ ಇಡಲಾಗಿದೆ.
ಈ ಗುಡ್ಡ ಕುಸಿತ ಸ್ಥಳದಲ್ಲಿ ಮೊದಲು ಓರ್ವ ಮಹಿಳೆ ಶವ ಪತ್ತೆಯಾಗಿತ್ತು. ಬಳಿಕ ಐದು ಜನರ ಮೃತದೇಹ ಸಿಕ್ಕಿತ್ತು. ಇದರಲ್ಲಿ ಒಂದೇ ಕುಟುಂಬದ ನಾಲ್ವರು ಮೃತರಾದರೆ, ಇನ್ನುಳಿದ ಇರ್ವರು ಯಾರು ಎಂಬುವುದು ಗುರುತು ಸಿಗುತ್ತಿಲ್ಲ. ಇದೀಗ ಕೊನೆಗೂ ದರ್ಘಟನಾ ಸ್ಥಳಕ್ಕೆ ಹಿಟಾಚಿ ಬಂದಿದ್ದು, ಮಣ್ಣು ತೆರವು ಕಾರ್ಯ ಮಾಡುತ್ತಿದ ಎನ್ನಲಾಗಿದೆ.