ಬೆಂಗಳೂರು:- ಜಿಲ್ಲೆಯ ಮುಂಡಗೋಡದ ಹೊನ್ನಿಕೊಪ್ಪದಲ್ಲಿ ನಿರಂತರ ಮಳೆಯಿಂದಾಗಿ ಮನೆ ಗೋಡೆ ಕುಸಿದು ಬಿದ್ದು ಮಹಿಳೆಯೊಬ್ಬರು ಗಂಭೀರಗೊಂಡ ಘಟನೆ ಜರುಗಿದೆ.
ಅಟೆಲ್ ಸಾಬ್ ಅತ್ತಾರ್ ಎಂಬುವವರಿಗೆ ಸೇರಿದ ಮನೆ ಇದಾಗಿದೆ. ಪಕ್ಕದ ಮನೆಯ ಸಾತವ್ವ ಭೀಮಣ್ಣ ಎಂಬುವವರಿಗೆ ಗಾಯವಾಗಿದೆ. ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಕಂದಾಯ ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ.