ಮಳೆ ಅವಾಂತರ: ಮನೆ ಗೋಡೆ ಕುಸಿತ; ಮಹಿಳೆ ಆಸ್ಪತ್ರೆ ಪಾಲು!

ಬೆಂಗಳೂರು:- ಜಿಲ್ಲೆಯ ಮುಂಡಗೋಡದ ಹೊನ್ನಿಕೊಪ್ಪದಲ್ಲಿ ನಿರಂತರ ಮಳೆಯಿಂದಾಗಿ ಮನೆ ಗೋಡೆ ಕುಸಿದು ಬಿದ್ದು ಮಹಿಳೆಯೊಬ್ಬರು ಗಂಭೀರಗೊಂಡ ಘಟನೆ ಜರುಗಿದೆ. Breaking News: ಬೀದಿ ನಾಯಿಗಳ ಉಪಟಳ: ನಿವೃತ್ತ ಶಿಕ್ಷಕಿ ಸಾವು! ಅಟೆಲ್ ಸಾಬ್ ಅತ್ತಾರ್ ಎಂಬುವವರಿಗೆ ಸೇರಿದ ಮನೆ ಇದಾಗಿದೆ. ಪಕ್ಕದ ಮನೆಯ ಸಾತವ್ವ ಭೀಮಣ್ಣ ಎಂಬುವವರಿಗೆ ಗಾಯವಾಗಿದೆ. ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ‌ರವಾನೆ ಮಾಡಲಾಗಿದೆ. ಸ್ಥಳಕ್ಕೆ ಕಂದಾಯ ಹಾಗೂ ಪೊಲೀಸ್‌ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ.