ಉಡುಪಿ:- ರಾಜ್ಯಾದ್ಯಂತ ವರುಣ ಆರ್ಭಟ ಜೋರಾಗಿದೆ. ಅದರಲ್ಲೂ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕೆಲ ತಾಲೂಕುಗಳಲ್ಲಿ ಮಳೆಗೆ ಅವಾಂತರಗಳು ಸೃಷ್ಟಿಯಾಗಿವೆ.
ಉಡುಪಿ ಜಿಲ್ಲೆಯ ಮೂರು ತಾಲೂಕುಗಳಾದ ಬೈಂದೂರು, ಕುಂದಾಪುರ, ಬ್ರಹ್ಮಾವರ ತಾಲೂಕಿನ ಶಾಲಾ- ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿ ಕುಂದಾಪುರ ಉಪ ವಿಭಾಗ ಸಹಾಯಕ ಆಯುಕ್ತೆ ರಶ್ಮಿ ಆದೇಶಿಸಿದ್ದಾರೆ. ಆದರೆ, ಪದವಿ, ಸ್ನಾತಕೋತ್ತರ ಪದವಿ, ಐಟಿಐ, ಇಂಜಿನಿಯರಿಂಗ್ ಮುಂತಾದ ವಿದ್ಯಾರ್ಥಿಗಳಿಗೆ ರಜೆ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಇನ್ನು ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ಮಳೆ ಆರ್ಭಟ ಮುಂದುವರಿದ ಹಿನ್ನೆಲೆ ಕುಮಟಾ ತಾಲೂಕಿನ ಶಾಲೆಗಳಿಗೆ ನಾಳೆ ರಜೆ ಘೋಷಿಸಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಆದೇಶಿಸಿದ್ದಾರೆ. ಅಗತ್ಯಬಿದ್ದಲ್ಲಿ ಹೊನ್ನಾವರ ತಾಲೂಕಿನ ಶಾಲೆಗಳಿಗೂ ರಜೆ ನೀಡಲು ಸೂಚನೆ ನೀಡಿದ್ದಾರೆ.