ಗುಜರಾತ್ ಮತ್ತು ಕೋಲ್ಕತಾ ನಡುವಿನ ಇಂದಿನ ಪಂದ್ಯಕ್ಕೆ ಮಳೆ ಕಾಟ ಎದುರಾಗಿದೆ. ಹೀಗಾಗಿ ಟಾಸ್ ವಿಳಂಬವಾಗಿದೆ. ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದೆ.
ಸಿಲಿಕಾನ್ ಸಿಟಿಯಲ್ಲಿ ಮಳೆಯ ಅವಾಂತರಗಳೆಷ್ಟು ಗೊತ್ತಾ!? ತುಷಾರ್ ಗಿರಿನಾಥ್ ಹೇಳಿದಿಷ್ಟು..!
ಹವಾಮಾನ ವೈಪರೀತ್ಯದಿಂದಾಗಿ ಗುಜರಾತ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯದ ಟಾಸ್ ವಿಳಂಬವಾಗಿದೆ. ಇಂದು ಐಪಿಎಲ್ 2024ರ 63ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸಿದೆ. ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದೆ. ಕಳೆದ ಪಂದ್ಯದಲ್ಲಿ ಗುಜರಾತ್ ತಂಡ ಚೆನ್ನೈ ವಿರುದ್ಧ ಭರ್ಜರಿ ಜಯ ಸಾಧಿಸಿತ್ತು. ಪ್ಲೇಆಫ್ ಆಸೆ ಜೀವಂತವಾಗಿರಿಸಿಕೊಳ್ಳಬೇಕಾದರೆ ಈ ಪಂದ್ಯವನ್ನೂ ಗೆಲ್ಲಲೇ ಬೇಕು. ಅದೇ ಸಮಯದಲ್ಲಿ, ಕೋಲ್ಕತ್ತಾ ತಂಡ ಈಗಾಗಲೇ ಪ್ಲೇ ಆಫ್ ತಲುಪಿದೆ. ಆದರೆ, ಉಳಿದಿರುವ ಲೀಗ್ ಪಂದ್ಯಗಳನ್ನು ಗೆದ್ದು ಅಗ್ರಸ್ಥಾನ ಕಾಯ್ದುಕೊಳ್ಳಲು ತಂಡ ಪ್ರಯತ್ನಿಸಲಿದೆ.