ಬೆಂಗಳೂರು:ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮುಂದಿನ 5 ದಿನಗಳ ಕಾಲ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.
ಅಮಿತ್ ಶಾ ಭೇಟಿಯಾಗಿದ್ದ ಹೆಚ್ಡಿ ದೇವೇಗೌಡ: ಡಿಕೆ ಶಿವಕುಮಾರ್ ಹೇಳಿದ್ದೇನು?
ಉತ್ತರ ಒಳನಾಡು, ದಕ್ಷಿಣ ಒಳನಾಡು, ಕಾರವಳಿ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಇಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಭಾಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ. ಬೆಳಗಾವಿ, ಬೀದರ್, ಕಲಬುರಗಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಕರಾವಳಿ ಜಿಲ್ಲೆಗಳ (Coastal Karnataka) ಕೆಲ ಭಾಗಗಳಲ್ಲಿ ಇಂದೂ ಭಾರೀ ಮಳೆಯಾಗಲಿದ್ದರೆ ದಕ್ಷಿಣ ಕನ್ನಡದಲ್ಲಿ (Dakshina Kannada) ಸಾಧಾರಣ ಮಳೆಯ ಮುನ್ಸೂಚನೆ ನೀಡಿದೆ.
ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಬೀದರ್, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.