ಬೆಂಗಳೂರು: ಮುಂದಿನ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಮಳೆಯಾಗುವುದಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಪೂರ್ವ ಮುಂಗಾರು ಇಳಿಕೆಯಾಗಲಿದೆ. ಹೀಗಾಗಿ ಮೇ 30 ರ ವರೆಗೆ ನಗರಕ್ಕೆ ಮಳೆಯಾಗುವುದಿಲ್ಲ. ಮೇ 31, ಜೂನ್ 1 ರ ಅವಧಿಯಲ್ಲಿ ಕೇರಳಕ್ಕೆ ಮುಂಗಾರು ಪ್ರವೇಶಿಸಲಿದೆ.
ಜೂ 1 ರ ಬಳಿಕ ಕರಾವಳಿ ಮತ್ತು ದಕ್ಷಿಣ ಒಳನಾಡು ಪ್ರದೇಶಗಳಿಗೆ ಭಾರೀ ಮಳೆ ಮುನ್ಸೂಚನೆ ಇದೆ. ವಾಡಿಕೆಗಿಂತ ಹೆಚ್ಚಾಗಿ ಮುಂಗಾರು ಅಬ್ಬರಿಸುವ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಪಶ್ಚಿಮ ಬಂಗಾಳ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿ ಮಾತ್ರ ರೆಮಲ್ ಆರ್ಭಟ ಜೋರಾಗಿರಲಿದೆ. ಆದರೆ ರಾಜ್ಯಕ್ಕೆ ರೆಮಲ್ ಚಂಡಮಾರುತದ ಭೀತಿ ಇಲ್ಲ. ತಮಿಳುನಾಡು ಮತ್ತು ಆಂಧ್ರ ಕರಾವಳಿ ಭಾಗದಿಂದ ಈ ಚಂಡಮಾರುತ ಭಾರೀ ದೂರ ಚಲಿಸಿದೆ.
ಸ್ನಾನ ಮಾಡುವಾಗ ಮೂತ್ರ ವಿಸರ್ಜನೆ ಮಾಡೋ ಅಭ್ಯಾಸವಿದ್ಯಾ..? ಹಾಗಾದ್ರೆ ಇಂದೇ ಬಿಟ್ಟುಬಿಡಿ
ಹೀಗಾಗಿ ಬೆಂಗಳೂರು ಸೇರಿದಂತೆ ರಾಜ್ಯ, ಹಾಗೂ ದಕ್ಷಿಣ ಭಾರತಕ್ಕೆ ಚಂಡಮಾರುತದಿಂದ ಯಾವುದೇ ಪರಿಣಾಮ ಇಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ. ಮುಂದಿನ ಮೂರ್ನಾಲ್ಕು ದಿನ ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಅತ್ತ ಕೋಲ್ಕತಾ, ಹಿಮಾಚಲ ಪ್ರದೇಶಗಳಿಗೆ ಚಂಡಮಾರುತದ ಎಫೆಕ್ಟ್ ಸಾಧ್ಯತೆ ಹಿನ್ನೆಲೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.