ಬೆಂಗಳೂರು:- ಡಿ.10 ರವರೆಗೆ ರಾಜ್ಯದ ಹಲವೆಡೆ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನೀವು ಚಿಕನ್ ಹೆಚ್ಚು ತಿಂತೀರಾ!? ಹಾಗಿದ್ರೆ ಕೋಳಿಯ ಈ ಭಾಗ ತಿನ್ನೋ ಮುನ್ನ ಯೋಚಿಸಿ, ಇಲ್ದಿದ್ರೆ ಅಪಾಯ ಫಿಕ್ಸ್!
ಡಿಸೆಂಬರ್ 2ರ ವರೆಗೆ ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ವಿಜಯನಗರ, ಶಿವಮೊಗ್ಗ, ಉಡುಪಿ, ಮಂಡ್ಯ, ರಾಮನಗರನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಬೆಳಗ್ಗೆ, ಸಂಜೆ ಚಳಿ ಇರಲಿದ್ದು, ಮಧ್ಯಾಹ್ನದ ವೇಳೆ ಬಿಸಿಲಿನ ವಾತಾವರಣ ಇರಲಿದೆ ಎಂದು ಮುನ್ಸೂಚನೆ ನೀಡಿದೆ
ಡಿಸೆಂಬರ್ 2ರಿಂದ 10ರ ವರೆಗೆ ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ವಿಜಯನಗರ, ಬಳ್ಳಾರಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳ ಹಲವೆಡೆ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಯಾವುದೇ ಮಳೆಯ ಮುನ್ಸೂಚನೆ ಇಲ್ಲ ಎಂದು ತಿಳಿಸಿದೆ.