ಬೆಂಗಳೂರು:- ಇಂದು ರಾಜಧಾನಿ ಬೆಂಗಳೂರಿನ ಹಲವೆಡೆ ಭಾನುವಾರವೂ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಶನಿವಾರ ಮಧ್ಯಾಹ್ನದ ನಂತರ ಬೆಂಗಳೂರಿನಲ್ಲಿಯೂ ಉತ್ತಮ ಮಳೆಯಾಗಿತ್ತು. ವಿಶೇಷವಾಗಿ ಬೆಂಗಳೂರಿನ ದಕ್ಷಿಣ ಹಾಗೂ ಪೂರ್ವ ಭಾಗಗಳಲ್ಲಿ ಉತ್ತಮ ಮಳೆಯಾಗಿತ್ತು
Breaking: ಗನ್ ಇಟ್ಕೊಂಡು CM ಸಿದ್ದುಗೆ ಹಾರ ಹಾಕಿದ ಕೇಸ್ – PSI ಸೇರಿ ನಾಲ್ವರು ಅಮಾನತು!
ಇನ್ನು ಭಾನುವಾರವೂ ತುಂತುರು ಹಾಗೂ ಸಾಧಾರಣ ಮಳೆ ಕೆಲವೆಡೆ ಮುಂದುವರೆಯುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ಸಹಿತ ಮೈಸೂರು, ಹುಬ್ಬಳ್ಳಿ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ ಇಲ್ಲೆಲ್ಲ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ಸಹಿತ ಮೈಸೂರು, ಹುಬ್ಬಳ್ಳಿ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ ಇಲ್ಲೆಲ್ಲ ಮಳೆಯಾಗುವ ಸಾಧ್ಯತೆ ಇದೆ
ಹಾಸನ, ಶಿವಮೊಗ್ಗ ಹಾಗೂ ಚಿಕ್ಕಮಗಳೂರಿನಂತಹ ಮಲೆನಾಡು ಹಾಗೂ ಘಟ್ಟ ಪ್ರದೇಶಗಳಲ್ಲಿಯೂ ಮಳೆ ಸುರಿಯುವ ಮುನ್ಸೂಚನೆ ಇದೆ.
ಶನಿವಾರ ಬೆಂಗಳೂರಿನ ದಕ್ಷಿಣ, ಪೂರ್ವ ಭಾಗದಲ್ಲಿ ಮಳೆಯಾದರೆ, ಭಾನುವಾರ ಉತ್ತರ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಬಗ್ಗೆ ಹವಾಮಾನ ತಜ್ಞರು ಅಂದಾಜಿಸಿದ್ದಾರೆ.