ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬಿರು ಬೇಸಿಗೆಯಿಂದ ತತ್ತರಿಸಿದ ಜನರಿಗೆ ಸದ್ಯ ಕೂಲ್ ಕೂಲ್ ವಾತವರಣ ಮನೆ ಮಾಡಿದೆ.
ವಿಶ್ವದ ಟಾಪ್ 20 ಅತ್ಯಂತ ಕಲುಷಿತ ನಗರಗಳ ಪಟ್ಟಿ ಪ್ರಕಟ; ಭಾರತದ್ದೇ ಮೇಲುಗೈ!
ಶಾಂತಿನಗರ, ಕಾರ್ಪೊರೇಷನ್, ರಿಚ್ಮಂಡ್ ಸರ್ಕಲ್, ಕೆ.ಆರ್.ಮಾರ್ಕೆಟ್, ಮೆಜೆಸ್ಟಿಕ್ ಸೇರಿದಂತೆ ಹಲವೆಡೆ ಮಳೆಯಾಗಿದ್ದು, ಬೇಸಿಗೆ ಬಿರು ಬಿಸಿಲಿನಿಂದ ಬಳಲಿದ್ದ ಬೆಂಗಳೂರಿಗರಿಗೆ ವರುಣನ ಸಿಂಚನವಾಗಿದೆ. ಇದು ಬೇಸಿಗೆಯ ಮೊದಲ ಮಳೆಯಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ತಂಪನೆಯ ವಾತಾವರಣ ಸಿಕ್ಕಂತಾಗಿದೆ.
ಕರ್ನಾಟಕದಲ್ಲಿ ಬೇಸಿಗೆಯ ಬಿರು ಬಿಸಿಲಿನ ಝಳ ಜನರನ್ನು ತತ್ತರಿಸಿದೆ. ರಾಜ್ಯಾದ್ಯಂತ ವಿಪರೀತ ಬಿಸಿಲಿಗೆ ಜನ ತತ್ತರಿಸಿದ್ದಾರೆ. ಇನ್ನು ಈ ಬಿರು ಬೇಸಿಗೆ ಹಾಗೂ ಸೆಕೆಗೆ ಬಸವಳಿದಿದ್ದ ಸಿಲಿಕಾನ್ ಸಿಟಿ ಬೆಂಗಳೂರು ಜನರಿಗೆ ವರುಣಾ ಕೂಲ್ ಕೂಲ್ ಮಾಡಿದ್ದಾರೆ.