ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ.
ಉಪಚುನಾವಣೆ: ಚನ್ನಪಟ್ಟಣ, ಸಂಡೂರು ಕ್ಷೇತ್ರಕ್ಕೆ ಸಿಪಿ ಯೋಗೇಶ್ವರ್, ಅನ್ನಪೂರ್ಣ ತುಕಾರಾಂಗೆ “ಕೈ” ಟಿಕೆಟ್!
ಬೆಂಗಳೂರಿನ ಅಂಗನವಾಡಿಗಳು, ಕೆಲವು ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದ್ದು, ಖಾಸಗಿ ಕಂಪನಿಗಳ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂ ಮಾಡಲು ಸೂಚಿಸಲಾಗಿದೆ.
ಕರ್ನಾಟಕದ ಮಳೆ ಪೀಡಿತ ಪ್ರದೇಶಗಳಲ್ಲಿ ದಕ್ಷಿಣ ಕನ್ನಡ, ಬಿಜಾಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಕೊಡಗು, ಶಿವಮೊಗ್ಗ ಮತ್ತು ತುಮಕೂರು ಸೇರಿವೆ. ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಬುಧವಾರ ಬೆಂಗಳೂರಿನಲ್ಲಿ ಪ್ರವಾಹ ಪರಿಹಾರಕ್ಕಾಗಿ ಮಳೆನೀರು ಚರಂಡಿ ಒತ್ತುವರಿಯನ್ನು ಕಟ್ಟುನಿಟ್ಟಾಗಿ ತೆರವುಗೊಳಿಸುವುದು ಸೇರಿದಂತೆ ಹಲವಾರು ಕ್ರಮಗಳನ್ನು ಘೋಷಿಸಿದ್ದಾರೆ. ಮಂಗಳವಾರ ಕೆಂಗೇರಿ ಕೆರೆಯಲ್ಲಿ ಮುಳುಗಡೆಯಾದ ಇಬ್ಬರು ಮಕ್ಕಳ ಕುಟುಂಬಕ್ಕೆ ಬಿಬಿಎಂಪಿಯಿಂದ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದಿದ್ದಾರೆ.