ಬೆಂಗಳೂರು:- ಇಂದಿನಿಂದ ಮೂರು ದಿನ ಕರ್ನಾಟಕದಲ್ಲಿ ಮಳೆ ಆರ್ಭಟ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಎಕ್ಸ್ಪ್ರೆಸ್ ರೈಲು ಅಪಘಾತ ಪ್ರಕರಣ: 19 ಮಂದಿಗೆ ಗಾಯ- ಸಚಿವ ವಿ ಸೋಮಣ್ಣ!
ಅಕ್ಟೋಬರ್ 12 ರಿಂದ 14ರವರೆಗೆ ಕರ್ನಾಟಕದ ಹಲವು ಪ್ರದೇಶಗಳಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಅಕ್ಟೋಬರ್ 16ರವರೆಗೆ ವರುಣನ ಅಬ್ಬರ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ನಿರ್ದೇಶಕ ಸಿ ಎಸ್ ಪಾಟೀಲ್ ಅಧಿಕೃತ ಮಾಹಿತಿ ನೀಡಿದ್ದಾರೆ. ಬೆಂಗಳೂರು ಅಕ್ಟೋಬರ್ 11 ರಿಂದ 16ರವರೆಗೆ ವರುಣರಾಯನ ಆರ್ಭಟ ಮುಂದುವರೆಯಲಿದೆ.
ಕಳೆದ ಎರಡು ವಾರಗಳಿಂದ ಭಾರಿ ಮಳೆಯಾಗಿದ್ದು, ಇದೆ ವೇಳೆ ಮೋಡ ಮುಸುಕಿದ ವಾತಾವರಣವೂ ಮುಂದುವರೆಯಲಿದೆ. ಇನ್ನು ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಅಕ್ಟೋಬರ್ 13ರವರೆಗೆ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಂಭವವಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಕ್ಟೋಬರ್ 12ರವರೆಗೆ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರದಲ್ಲಿ ಭಾರೀ ಮಳೆಯಾಗಲಿದೆ.
ಜೊತೆಗೆ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.