ಬೆಂಗಳೂರು:- ರಾಜ್ಯದ ಹಲವೆಡೆ ಇಂದು ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆ ಮಳೆಯಾಗಿದೆ, ಕರಾವಳಿಯಲ್ಲಿ ಒಣಹವೆ ಇತ್ತು. ಚಾಮರಾಜನಗರದಲ್ಲಿ 17.3 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದ್ದು, ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.
ಎಚ್ಎಎಲ್ನಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.