ನವದೆಹಲಿ:- ಇಂದಿನಿಂದ ಮೂರು ದಿನಗಳ ಕಾಲ ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮಳೆ ಆಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿಯೂ ಹವಾಮಾನ ಬದಲಾಗುತ್ತಿದೆ. ನೋಯ್ಡಾ, ಗಾಜಿಯಾಬಾದ್, ಗುರುಗ್ರಾಮ್ ಮುಂತಾದ ಸುತ್ತಮುತ್ತಲಿನ ಪ್ರದೇಶಗಳಲ್ಲಿಯೂ ಬಲವಾದ ಗಾಳಿ ಬೀಸುತ್ತಿದೆ. ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ಮಿಜೋರಾಂ ಮತ್ತು ಗುಡುಗು ಸಹಿತ ಮಳೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಕರ್ನಾಟಕ, ಪಶ್ಚಿಮ ಬಂಗಾಳ, ದೆಹಲಿ ಸೇರಿದಂತೆ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎಲ್ಲೆಡೆಯೂ ಚಳಿಯ ವಾತಾವರಣ ಮುಗಿದಿದ್ದು ದಿನದಿಂದ ದಿನಕ್ಕೆ ಬಿಸಿಲ ಕಾವು ಹೆಚ್ಚಾಗಿದೆ. ಈಶಾನ್ಯ ಮತ್ತು ಪೂರ್ವ ಭಾರತದಲ್ಲಿ ಚಂಡಮಾರುತದೊಂದಿಗೆ ಮಳೆಯಾಗುವ ಮುನ್ಸೂಚನೆ ಇದೆ. ಈ ಹಿಂದೆ ಮಧ್ಯ ಭಾರತದ ಹಲವು ಪ್ರದೇಶಗಳಲ್ಲಿ ಮಳೆ ದಾಖಲಾಗಿತ್ತು.
ವಿದರ್ಭ ಮತ್ತು ಛತ್ತೀಸ್ಗಢದ ಕೆಲವು ಪ್ರದೇಶಗಳಲ್ಲಿ ಮಳೆಯಾಗಿದೆ. ಒಡಿಶಾದ ಉತ್ತರ ಭಾಗಗಳ ಜೊತೆಗೆ, ಪೂರ್ವ ಜಾರ್ಖಂಡ್, ಪಶ್ಚಿಮ ಬಂಗಾಳ, ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶದಲ್ಲಿಯೂ ಸಹ ಬಲವಾದ ಗಾಳಿಯೊಂದಿಗೆ ಮಳೆಯಾಗಿದೆ.