ಬೆಂಗಳೂರು:- ರಾಜ್ಯದ ದಕ್ಷಿಣ ಒಳನಾಡು, ಕರಾವಳಿಯಲ್ಲಿ ಇಂದು ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.
ರಾಜ್ಯದ ಹಲವು ಸ್ಥಳಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಬೆಳಗಿನ ಜಾವ ದಟ್ಟ ಮಂಜು ಕವಿದಿರಲಿದೆ. ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇದೆ.
ಎಚ್ಎಎಲ್ನಲ್ಲಿ 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರಿನಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 28.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.