ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
Kitchen Tips: ಕೊತ್ತಂಬರಿ ಸೊಪ್ಪು ಬೇಗ ಹಾಳಾಗಬಾರದು ಅಂದ್ರೆ ಈ ಸಿಂಪಲ್ ಟ್ರಿಕ್ಸ್ ಫಾಲೋ ಮಾಡಿ!
ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ. ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಒಣಹವೆ ಮುಂದುವರೆಯಲಿದೆ.
ಉಪ್ಪಿನಂಗಡಿ, ಹಾರಂಗಿ, ಪಣಂಬೂರಿನಲ್ಲಿ ಮಳೆಯಾಗಿದೆ, ಬೆಂಗಳೂರಿನ ಎಚ್ಎಎಲ್ನಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ