ಬೆಂಗಳೂರು:- ಇಂದು ಕರ್ನಾಟಕದ ಹಲವೆಡೆ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಬಂಗಳಾಕೊಲ್ಲಿ ಸಾಗರದಲ್ಲಿ ವಾಯುಭಾರ ಕುಸಿತದ ಪ್ರಭಾವದಿಂದ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಇಂದು ಮಳೆಯಾಗಲಿದೆ ಎಂದು ಹೇಳಿದ್ದಾರೆ.
ಶುಕ್ರವಾರ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶ ಸುಮಾರು 17 ರಿಂದ 19 ಡಿಗ್ರಿ ಸೆಲ್ಸಿಯಸ್ಗೆ ಇಳಿಯುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದ್ದಾರೆ.
ಬೆಂಗಳೂರಿನಲ್ಲಿ ಕೂಡ ಶುಕ್ರವಾರ ಅಲ್ಲಲ್ಲಿ ಹಗುರವಾದ ಮಳೆಯಾಗಲಿದೆ ಎಂದು ಮಾಹಿತಿ ನೀಡಿದ್ದು, ಶುಕ್ರವಾರ ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದ್ದು ಗರಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹೇಳಿದ್ದಾರೆ.
ಶುಕ್ರವಾರದ ಬಳಿಕ ರಾಜ್ಯದಲ್ಲಿ ಒಣಹವೆ ಮುಂದುವರೆಯಲಿದ್ದು ಈ ಬಾರಿ ಚಳಿ ಹೆಚ್ಚಾಗಲಿದೆ ಎಂದು ಹೇಳಲಾಗಿದೆ.