ಬೆಂಗಳೂರು:- ಕರ್ನಾಟಕದ 9ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಿಫಾ ಭೀತಿ: ವೈರಸ್ಗಳ ಹಬ್ ಆಗುತ್ತಿದ್ಯಾ ಬೆಂಗಳೂರು!? ಆತಂಕದಲ್ಲಿ ಸಿಟಿ ಮಂದಿ!
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಕಲಬುರಗಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗಲಿದೆ.
ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ, ಬೀದರ್ನಲ್ಲಿ ಒಣಹವೆ ಇರಲಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಎಚ್ಎಎಲ್ನಲ್ಲಿ 29.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 30.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 31.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.