ಬೆಂಗಳೂರು:- ಕರ್ನಾಟಕದ 15 ಜಿಲ್ಲೆಗಳಲ್ಲಿ ನಾಲ್ಕು ದಿನ ಧಾರಕಾರ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಲೈಂಗಿಕ ದೌರ್ಜನ್ಯ ಆರೋಪ: ಜಾನಿ ಮಾಸ್ಟರ್ಗೆ ಘೋಷಿಸಿದ್ದ ರಾಷ್ಟ್ರಪ್ರಶಸ್ತಿ ರದ್ದು!
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನ ಎಚ್ಎಎಲ್ನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.