ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಎರಡು ದಿನ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
Rs.1100 ಕೊಟ್ಟರೆ ಡಿಜಿಟಲ್ ಕುಂಭ ಸ್ನಾನ: ನೀವು ಮಾಡಬೇಕಾದದ್ದು ಇಷ್ಟೇ!
ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಕೊಪ್ಪಳ, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.
ಗರಿಷ್ಠ ತಾಪಮಾನ ಕರಾವಳಿಯಲ್ಲಿ 33-35 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಬೀದರ್, ವಿಜಯಪುರ, ಧಾರವಾಡ, ಕೊಪ್ಪಳ, ರಾಯಚೂರು, ಹಾವೇರಿಯಲ್ಲಿ 33-35 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಕಲಬುರಗಿ, ಬಾಗಲಕೋಟೆ ಮತ್ತು ಗದಗದಲ್ಲಿ 36-38 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಕನಿಷ್ಠ ತಾಪಮಾನವು ಕರಾವಳಿಯಲ್ಲಿ 25-26 ಡಿಗ್ರಿ ಸೆಲ್ಸಿಯಸ್ನಷ್ಟಿದೆ, ಬೀದರ್, ಧಾರವಾಡದಲ್ಲಿ 17-19 ಡಿಗ್ರಿ ಸೆಲ್ಸಿಯಸ್, ವಿಜಯಪುರ, ಬೆಳಗಾವಿ, ಗದಗ, ಬಾಗಲಕೋಟೆ, ಚಿಂತಾಮಣಿ, ಹಾವೇರಿ, ಕೊಪ್ಪಳ, ಮಂಡ್ಯ, ಚಿತ್ರದುರ್ಗ, ಹಾಸನ, ಮಡಿಕೇರಿ, ಶಿವಮೊಗ್ಗದಲ್ಲಿ 17-20 ಡಿಗ್ರಿ ಸೆಲ್ಸಿಯಸ್ನಷ್ಟಿದೆ.
ಬೆಂಗಳೂರಿನಲ್ಲಿ ಆಗಾಗ ಮೋಡಕವಿದ ವಾತಾವರಣವಿರಲಿದೆ, ಎಚ್ಎಎಲ್ನಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ32.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ